ನಾಳೆ ರಾಜ್ಯಸಭೆಯಲ್ಲಿ ತ್ರಿವಳಿ ತಲಾಖ್ ಮಸೂದೆ
ಈಗಾಗಲೇ ಲೋಕಸಭೆಯಲ್ಲಿ ಮಂಡನೆಯಾಗಿರುವ ತ್ರಿವಳಿ ತಲಾಖ್ ಮಸೂದೆ ಜ.2 ರಂದು ರಾಜ್ಯಸಭೆಯಲ್ಲಿ ಮಂಡನೆಯಾಗಲಿದೆ.

Published On :
ನವದೆಹಲಿ: ಈಗಾಗಲೇ ಲೋಕಸಭೆಯಲ್ಲಿ ಮಂಡನೆಯಾಗಿರುವ ತ್ರಿವಳಿ ತಲಾಖ್ ಮಸೂದೆ ಜ.2 ರಂದು ರಾಜ್ಯಸಭೆಯಲ್ಲಿ ಮಂಡನೆಯಾಗಲಿದೆ.
ತ್ರಿವಳಿ ತಲಾಖ್ ಘೋಷಣೆ ಮಾಡಿದರೆ ಮೂರು ವರ್ಷಗಳವರೆಗೂ ಜೈಲು ಶಿಕ್ಷೆ ವಿಧಿಸುವ ಮಸೂದೆಯನ್ನು ಲೋಕಸಭೆಯಲ್ಲಿ ಡಿ.28 ರಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಮಂಡಿಸಿದ್ದರು. ತಲಾಖ್ ಅಥವಾ ತ್ರಿವಳಿ ತಲಾಖ್ ನ ಒಂದು ವಿಧವಾದ ತಲಾಖ್-ಎ-ಬಿದ್ದತ್ ನ್ನು ರದ್ದುಗೊಳಿಸಿದ್ದ ಮಸೂದೆಯಲ್ಲಿ ತಲಾಖ್ ನೀಡುವ ಪತಿಗೆ 3 ವರ್ಷಗಳ ಜೈಲು ಶಿಕ್ಷೆ ಹಾಗೂ ಸಂತ್ರಸ್ತ ಮಹಿಳೆ ಮಕ್ಕಳನ್ನು ತನ್ನೊಂದಿಗೆ ಕರೆದೊಯ್ಯುವ ಅಂಶಗಳನ್ನು ಸೇರ್ಪಡಿಸಲಾಗಿತ್ತು.
ಕಾಯ್ದೆಯ ಅನ್ವಯ ಯಾವುದೇ ಮುಸ್ಲಿಂ ವ್ಯಕ್ತಿ ತನ್ನ ಪತ್ನಿಗೆ ಮೌಖಿಕವಾಗಿಯಾಗಲೀ, ಬರವಣಿಗೆ ಮೂಲಕವಾಗಲೀ, ಅಥವಾ ಇ-ಮೇಲ್, ಸಾಮಾಜಿಕ ಜಾಲತಾಣ, ಎಸ್ ಎಂಎಸ್, ವಾಟ್ಸಪ್ ನಂತಹ ಯಾವುದೇ ರೀತಿಯ ವಿದ್ಯುನ್ಮಾನ ಮಾಧ್ಯಮಗಳ ಮೂಲಕವಾಗಲಿ ತ್ರಿವಳಿ ತಲಾಖ್ ಘೋಷಣೆ ಮಾಡುವಂತಿಲ್ಲ. ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರವಾದರೆ ಸುಪ್ರೀಂ ಕೋರ್ಟ್ ಮೆಟ್ಟಿಲೇರುವುದಾಗಿ ಮುಸ್ಲಿಂ ಸಂಘಟನೆಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


