ನಾಳೆ ಪಂಜಾಬ್, ಗೋವಾದಲ್ಲಿ ಮತದಾನ
ತೀವ್ರ ಕುತೂಹಲ ಕೆರಳಿಸಿರುವ ಪಂಜಾಬ್ ಹಾಗೂ ಗೋವಾ ರಾಜ್ಯಗಳ ಚುನಾವಣಾಗೆ ಶನಿವಾರದಿಂದ ಮತದಾನ ಪ್ರಕ್ರಿಯೆಗಳು ಆರಂಭಗೊಳ್ಳಲಿವೆ...

ಚಂಡೀಗಢ: ತೀವ್ರ ಕುತೂಹಲ ಕೆರಳಿಸಿರುವ ಪಂಜಾಬ್ ಹಾಗೂ ಗೋವಾ ರಾಜ್ಯಗಳ ಚುನಾವಣಾಗೆ ಶನಿವಾರದಿಂದ ಮತದಾನ ಪ್ರಕ್ರಿಯೆಗಳು ಆರಂಭಗೊಳ್ಳಲಿವೆ.
ಪಂಜಾಬ್ ರಾಜ್ಯದಲ್ಲಿ 117 ಮತ್ತು ಗೋವಾದಲ್ಲಿ 40 ಸ್ಥಾನಗಳಿಗೆ ಏಕಹಂತದಲ್ಲಿ ಚುನಾವಣೆ ನಡೆಯಲಿದೆ. ಪಂಜಾಬ್ ನಲ್ಲಿ ಬಿಜೆಪಿ-ಅಕಾಲಿದಳ, ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ ಪಕ್ಷಗಳ ನಡುವೆ ತ್ರಿಕೋನ ಸಮರ ಏರ್ಪಡಲಿದೆ. ಚುನಾವಣೆ ಹಿನ್ನಲೆಯಲ್ಲಿ ಈಗಾಗಲೇ ಹಲವು ಸಮೀಕ್ಷೆಗಳು ನಡೆದಿದ್ದು, ಸಮೀಕ್ಷೆಯ ಬಹುತೇಕ ವರದಿಗಳು ಆಡಳಿತಾರೂಢ ಅಕಾಲಿದಳ-ಬಿಜೆಪಿ ಧೂಳೀಪಟವಾಗುವ ಭವಿಷ್ಯವನ್ನೇ ನುಡಿದಿವೆ.
ಪಂಜಾಬ್ ನಲ್ಲಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್, ಉಪ ಮುಖ್ಯಮಂತ್ರಿ ಸುಖಬೀರ್ ಬಾದಲ್, ಕಾಂಗ್ರೆಸ್ ನ ಅಮರೀಂದರ್ ಸಿಂಗ್, ನವಜೋತ್ ಸಿಂಗ್ ಹಾಗೂ ಆಮ್ ಆದ್ಮಿ ಪಕ್ಷದಲ್ಲಿ ಭಗವಂತ ಮಾನ್ ಪ್ರಮುಖ ಸ್ಪರ್ಧಿಗಳಾಗಿದ್ದಾರೆ.
ವಿಶೇಷವೆಂದರೆ, ಮುಖ್ಯಂಮತ್ರಿ ಬಾದಲ್ ಅವರ ವಿರುದ್ಧ ಅಮರೀಂದರ್ ಅವರು ಸ್ಪರ್ಧಿಸಿದ್ದರೆ, ಉಪಮುಖ್ಯಮಂತ್ರಿ ಸುಖಬೀರ್ ವಿರುದ್ಧ ಭಗವಂತ್ ಮಾನ್ ಅವರು ಕಣಕ್ಕಿಳಿದಿದ್ದಾರೆ.ಇದರಂತೆ ಗೋವಾದಲ್ಲಿಯೂ ಬಿಜೆಪಿ, ಕಾಂಗ್ರೆಸ್, ಆಮ್ ಆದ್ಮಿ ಪಕ್ಷ, ಎಂಜಿಪಿ ಮತ್ತು ಇತರರ ನಡುವೆ ಬಹುಕೋನ ಸ್ಪರ್ಧೆ ಇದೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರೂ.500 ಹಾಗೂ 1,000 ದುಬಾರಿ ನೋಟುಗಳ ಮೇಲೆ ನಿಷೇಧ ಹೇರಿದ ಬಳಿಕ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದೆ. ಹೀಗಾಗಿ ಬಿಜೆಪಿ ಇದು ಅಗ್ನಿ ಪರೀಕ್ಷೆಯ ಚುನಾವಣೆಯೆಂದೇ ಹೇಳಬಹುದಾಗಿದೆ. ಪಂಜಾಬ್ ರಾಜ್ಯದಲ್ಲಿ 1.98 ಮತದಾರರು ಮತದಾನ ಮಾಡಲಿದ್ದು, 81 ಅಲ್ಪಸಂಖ್ಯಾತರು ಹಾಗೂ ಮಹಿಳೆಯರು ಸೇರಿದಂತೆ 1,145 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
ಎರಡು ರಾಜ್ಯಗಳಲ್ಲಿ ನಾಳೆಯಿಂದ ಚುನಾವಣೆ ಆರಂಭವಾಗುತ್ತಿರುವ ಹಿನ್ನಲೆಯಲ್ಲಿ ಈಗಾಗಲೇ ಪಂಜಾಬ್ ಹಾಗೂ ಗೋವಾ ರಾಜ್ಯಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


