ಗೋವಾ, ಪಂಜಾಬ್ ಜನತೆ ಇಂದು ಇತಿಹಾಸ ಸೃಷ್ಟಿಸಲಿದ್ದಾರೆ: ಕೇಜ್ರಿವಾಲ್
ಗೋವಾ ಹಾಗೂ ಪಂಜಾಬ್ ರಾಜ್ಯಗಳಲ್ಲಿ ಮತದಾನ ಪ್ರಕ್ರಿಯೆಗಳು ಆರಂಭವಾಗಿದ್ದು, ರಾಜ್ಯಗಳ ಜನತೆ ದಾಖಲೆ ಸಂಖ್ಯೆಯಲ್ಲಿ ಮತದಾನ ಮಾಡುವ ಮೂಲಕ ಇಂದು ಇತಿಹಾಸವನ್ನು ಸೃಷ್ಟಿಸಲಿದ್ದಾರೆಂದು ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್...

ನವದೆಹಲಿ: ಗೋವಾ ಹಾಗೂ ಪಂಜಾಬ್ ರಾಜ್ಯಗಳಲ್ಲಿ ಮತದಾನ ಪ್ರಕ್ರಿಯೆಗಳು ಆರಂಭವಾಗಿದ್ದು, ರಾಜ್ಯಗಳ ಜನತೆ ದಾಖಲೆ ಸಂಖ್ಯೆಯಲ್ಲಿ ಮತದಾನ ಮಾಡುವ ಮೂಲಕ ಇಂದು ಇತಿಹಾಸವನ್ನು ಸೃಷ್ಟಿಸಲಿದ್ದಾರೆಂದು ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರು ಶನಿವಾರ ಹೇಳಿದ್ದಾರೆ.
ಪಂಚ ರಾಜ್ಯಗಳ ಪೈಕಿ ಎರಡು ರಾಜ್ಯಗಳಾದ ಪಂಜಾಬ್ ಹಾಗೂ ಗೋವಾದಲ್ಲಿ ವಿಧಾನಸಭಾ ಚುನಾವಣೆ ಆರಂಭವಾಗಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಎರಡು ರಾಜ್ಯಗಳಲ್ಲಿ ಇಂದು ಮತದಾನ ಪ್ರಕ್ರಿಯೆಗಳು ಆರಂಭವಾಗಿದ್ದು, ಜನತೆ ಪ್ರಮಾಣಿಕ ರಾಜಕೀಯ ಪಕ್ಷಕ್ಕೆ ಮತ ಹಾಕಬೇಕಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿರುವ ಪ್ರತೀಯೊಬ್ಬರು ಮತದಾನ ಮಾಡಬೇಕಿದೆ. ನಿಮ್ಮೊಂದಿಗೆ ನಮ್ಮ ಗ್ರಾಮಸ್ಥರನ್ನು ಜೊತೆಗೆ ಮತಗಟ್ಟೆಗೆ ಹೋಗಿ ಪ್ರಮಾಣಿಕ ರಾಜಕೀಯ ಪಕ್ಷಕ್ಕೆ ಮತಹಾಕಿ ಎಂದು ಕರೆ ನೀಡಿದ್ದಾರೆ. ಅಲ್ಲದೆ, ಎರಡೂ ರಾಜ್ಯಗಳ ಜನತೆ ಇಂದು ಇತಿಹಾಸವನ್ನು ಸೃಷ್ಟಿಸಲಿದ್ದಾರೆಂದು ತಿಳಿಸಿದ್ದಾರೆ.
ಪಂಜಾಬ್ ನಲ್ಲಿ ಬಿಜೆಪಿ-ಅಕಾಲಿದಳ, ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ ಪಕ್ಷಗಳ ನಡುವೆ ತ್ರಿಕೋನ ಸಮರ ಏರ್ಪಡಲಿದೆ. ಪಂಜಾಬ್ ನಲ್ಲಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್, ಉಪ ಮುಖ್ಯಮಂತ್ರಿ ಸುಖಬೀರ್ ಬಾದಲ್, ಕಾಂಗ್ರೆಸ್ ನ ಅಮರೀಂದರ್ ಸಿಂಗ್, ನವಜೋತ್ ಸಿಂಗ್ ಹಾಗೂ ಆಮ್ ಆದ್ಮಿ ಪಕ್ಷದಲ್ಲಿ ಭಗವಂತ ಮಾನ್ ಪ್ರಮುಖ ಸ್ಪರ್ಧಿಗಳಾಗಿದ್ದಾರೆ. ಇದರಂತೆ ಗೋವಾದಲ್ಲಿಯೂ ಬಿಜೆಪಿ, ಕಾಂಗ್ರೆಸ್, ಆಮ್ ಆದ್ಮಿ ಪಕ್ಷ, ಎಂಜಿಪಿ ಮತ್ತು ಇತರರ ನಡುವೆ ಬಹುಕೋನ ಸ್ಪರ್ಧೆ ಇದೆ.
ಗೋವಾ ರಾಜ್ಯದಲ್ಲಿ 11 ಲಕ್ಷ ಜನರು ಇಂದು ಮತದಾನದಲ್ಲಿ ಪಾಲ್ಗೊಳ್ಳುತ್ತಿದ್ದು, 1,642 ಮತಗಟ್ಟೆಗಳನ್ನು ತೆರೆಯಲಾಗಿದೆ. ಪಂಜಾಬ್ ರಾಜ್ಯದಲ್ಲಿ 1.98 ಮತದಾರರು ಮತದಾನ ಮಾಡಲಿದ್ದು, 81 ಅಲ್ಪಸಂಖ್ಯಾತರು ಹಾಗೂ ಮಹಿಳೆಯರು ಸೇರಿದಂತೆ 1,145 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


