ಬಾರಾಮುಲ್ಲಾ ಎನ್'ಕೌಂಟರ್: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ ಎಂದು ಶನಿವಾರ ತಿಳಿದುಬಂದಿದೆ...

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ ಎಂದು ಶನಿವಾರ ತಿಳಿದುಬಂದಿದೆ.
ಬಾರಾಮುಲ್ಲಾ ಜಿಲ್ಲೆಯ ಸೊಪೊರ್ ತೆಹ್ಸಿಲ್ ನಲ್ಲಿರುವ ಅಮರ್ ಗರ್ಹ್ ಗ್ರಾಮದ ಮನೆಯೊಂದರಲ್ಲಿ ಉಗ್ರರು ಅಡಗಿಕುಳಿತಿರುವುದಾಗಿ ಮಾಹಿತಿ ತಿಳಿದುಬಂದಿತ್ತು. ಇದರಂತೆ ಉಗ್ರರನ್ನು ಸದೆಬಡಿಯಲು 52 ರಾಷ್ಟ್ರೀಯ ರೈಫಲ್ ಸೇನೆ ಕಾರ್ಯಾಚರಣೆಗಿಳಿದಿತ್ತು.
ಸೇನೆ ಕಾರ್ಯಾಚರಣೆ ಆರಂಭ ಮಾಡುತ್ತಿದ್ದಂತೆಯೇ ಉಗ್ರರು ಸೇನೆ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದಾರೆ. ಈ ವೇಳೆ ಕಾರ್ಯಾಚರಣೆಯನ್ನು ಚುರುಕುಗೊಳಿಸಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಪ್ರಸ್ತುತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಮೂಲಗಳು ತಿಳಿಸಿವೆ.
ಉಗ್ರರು ಹತ್ಯೆಯಾದ ಬಳಿಕ ಅವರ ಬಳಿಯಿದ್ದ 1 ಎಕೆ.-47 ಹಾಗೂ ಇನ್ನಿತರೆ ಸ್ಫೋಟಕ ವಸ್ತುಗಳು, ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


