ದೇಶ

ರಾಮ ಮಂದಿರ ನಿರ್ಮಾಣ ಕಾರ್ಯ ಶೀಘ್ರದಲ್ಲೇ ಆರಂಭಗೊಳ್ಳಲಿದೆ: ಯೋಗಿ ಆದಿತ್ಯಾನಾಥ್

ರಾಮ ಮಂದಿರ ನಿರ್ಮಾಣ ಹಾದಿಯಲ್ಲಿ ಉಂಟಾಗಿದ್ದ ಸಂಕಷ್ಟ ಹಾಗೂ ಸಮಸ್ಯೆಗಳು ಬದಿಗೆ ಸರಿಯುತ್ತಿದ್ದು, ಶೀಘ್ರದಲ್ಲಿ ದೇಗುಲ ನಿರ್ಮಾಣ ಕಾರ್ಯಗಳು ಆರಂಭಗೊಳ್ಳಿಲಿದೆ ಎಂದು ಬಿಜೆಪಿ ಸಂಸದ ಯೋಗಿ ಆದಿತ್ಯಾನಾಥ ಅವರು ಶನಿವಾರ ಹೇಳಿದ್ದಾರೆ...

ರಾಮ ಮಂದಿರ ನಿರ್ಮಾಣ ಕಾರ್ಯ ಶೀಘ್ರದಲ್ಲೇ ಆರಂಭಗೊಳ್ಳಲಿದೆ: ಯೋಗಿ ಆದಿತ್ಯಾನಾಥ್
ಬಿಜೆಪಿ ಸಂಸದ ಯೋಗಿ ಆದಿತ್ಯಾನಾಥ್
Published On :

ರಾಯ್ಪುರ: ರಾಮ ಮಂದಿರ ನಿರ್ಮಾಣ ಹಾದಿಯಲ್ಲಿ ಉಂಟಾಗಿದ್ದ ಸಂಕಷ್ಟ ಹಾಗೂ ಸಮಸ್ಯೆಗಳು ಬದಿಗೆ ಸರಿಯುತ್ತಿದ್ದು, ಶೀಘ್ರದಲ್ಲಿ ದೇಗುಲ ನಿರ್ಮಾಣ ಕಾರ್ಯಗಳು ಆರಂಭಗೊಳ್ಳಿಲಿದೆ ಎಂದು ಬಿಜೆಪಿ ಸಂಸದ ಯೋಗಿ ಆದಿತ್ಯಾನಾಥ ಅವರು ಶನಿವಾರ ಹೇಳಿದ್ದಾರೆ.

ರಾಯ್ಪುರದಲ್ಲಿ ನಡೆದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿರುವ ಅವರು, ಚಂಡೀಗಢ ರಾಮನ ತಾಯಿ ಕೌಸಲ್ಯ ಅವರ ತವರು ನಾಡು ಆಗಿದೆ. ರಾಮ ಮಂದಿರ ನಿರ್ಮಾಣಕ್ಕೆ ಎದುರಾಗಿ ಸಮಸ್ಯೆಗಳು ಬಗೆಹರಿಯುತ್ತಿದ್ದು, ಶೀಘ್ರದಲ್ಲಿಯೇ ಮಂದಿರ ನಿರ್ಮಾಣ ಕಾರ್ಯಗಳು ಆರಂಭಗೊಳ್ಳಲಿದೆ ಎಂದು ಹೇಳಿದ್ದಾರೆ.

ದೈವದೂತ ರಾಮನಿಂದ ಪ್ರತೀಯೊಬ್ಬರೂ ಪಾಠ ಕಲಿಯಬೇಕಿದೆ. ದೇಶ ಕಟ್ಟಲು ಜನತೆ ಒಗ್ಗೂಡಿ ಕೆಲಸ ಮಾಡಬೇಕಿದೆ. ಮರ್ಯಾದಾ ಪುರುಷೋತ್ತಮ ರಾಮ ತನ್ನ ಇಡೀ ಜೀವನವನ್ನು ಸಾಮಾಜಿಕ ಸಾಮರಸ್ಯ ಮತ್ತು ಸಮಾನತೆಗಾಗಿ ಮುಡಿಪಾಗಿಟ್ಟಿದ್ದರು. ಹೀಗಾಗಿ ದೇಶ ಕಟ್ಟಲು ದಲಿತರು, ಬುಡಕಟ್ಟು ಜನರು, ಹಿಂದುಳಿದ ಜನರೆನ್ನಲದೆ ಪ್ರತೀಯೊಬ್ಬರೂ ಕೈಜೋಡಿಸಿ ಕೆಲಸ ಮಾಡಬೇಕಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.