ದೇಶ

ಅಕ್ರಮ ಆಸ್ತಿ ಪ್ರಕರಣದಲ್ಲಿ ಆರೋಪಿಯಾಗಿರುವ ಶಶಿಕಲಾ ಸಿಎಂ ಆಗುವುದು ಸರಿಯಲ್ಲ: ಸ್ವಾಮಿ

ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ ಶಶಿಕಲಾ ನಟರಾಜನ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಕೇಸ್ ಇರುವುದರಿಂದ ಅವರು ತಮಿಳುನಾಡಿನ ಮುಖ್ಯಮಂತ್ರಿ ..

ಅಕ್ರಮ ಆಸ್ತಿ ಪ್ರಕರಣದಲ್ಲಿ ಆರೋಪಿಯಾಗಿರುವ ಶಶಿಕಲಾ ಸಿಎಂ ಆಗುವುದು ಸರಿಯಲ್ಲ: ಸ್ವಾಮಿ
ಸುಬ್ರಮಣಿಯನ್ ಸ್ವಾಮಿ
Published On :

ನವದೆಹಲಿ: ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ ಶಶಿಕಲಾ ನಟರಾಜನ್  ವಿರುದ್ಧ ಅಕ್ರಮ ಆಸ್ತಿ ಗಳಿಕೆ ಕೇಸ್ ಇರುವುದರಿಂದ ಅವರು ತಮಿಳುನಾಡಿನ ಮುಖ್ಯಮಂತ್ರಿ ಆಗುವುದು ಸರಿಎನಿಸುವುದಿಲ್ಲ ಎಂದು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

ಸುದ್ದಿಸಂಸ್ಥೆಯೊಂದಿಗೆ ಮಾತನಾಡಿರುವ ಅವರು, ಶಶಿಕಲಾ ಅವರು ಮುಖ್ಯಮಂತ್ರಿಯಾಗಲು ಯಾವುದೇ ನಿರ್ಬಂಧಗಳಿಲ್ಲ, ಆದರೆ ಅವರ ವಿರುದ್ಧ ಸುಪ್ರೀಂಕೋರ್ಟ್ ನಲ್ಲಿ ಹಲವು ಪ್ರಕರಣಗಳಿವೆ, ಇವೆಲ್ಲಾ ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದ್ದಾಗಿವೆ ಎಂದು ಅವರು ಹೇಳಿದ್ದಾರೆ.

ಎಲ್ಲಕ್ಕಿಂತ ಹೆಚ್ಚಾಗಿ ಅವರು ಉಪ ಚುನಾವಣೆಗೆ ಸ್ಪರ್ಧಿಸುವ ಮುನ್ನ ಸುಪ್ರೀಂ ಕೋರ್ಟ್ನಲ್ಲಿರುವ ಕೇಸುಗಳ ತೀರ್ಪು ಬರಬೇಕು. ಹೀಗಾಗಿ ಶಶಿಕಲಾ ಅವರು ಸಿಎಂ ಎಂದು ಘೋಷಿಸಿಕೊಳ್ಳುವ ಮೊದಲು ಬುದ್ಧಿವಂತಿಕೆಯಿಂದ ಹೆಜ್ಜೆ ಇಡಬೇಕು ಎಂದು ಸಲಹೆ ನೀಡಿದ್ದಾರೆ.

ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿರುವ ಶಶಿಕಲಾ ಅವರು ಪ್ರಬಲ ಮಹಿಳೆಯಾಗಿದ್ದಾರೆ. ಇಂದು ಶಶಿಕಲಾ ಪಕ್ಷದ ಶಾಸಕರೊಂದಿಗೆ ಸಭೆ ನಡೆಸಲಿದ್ದಾರೆ ಎಂಬ ಸುದ್ದಿಯನ್ನು ಪಕ್ಷದ ಹಿರಿಯ ನಾಯಕರು ನಿರಾಕರಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.