ಮಾಜಿ ಸಚಿವ ಇ.ಅಹಮದ್ ನಿಧನ ಪ್ರಕರಣ: ಸಂಸತ್ತಿನ ಗಾಂಧಿ ಪ್ರತಿಮೆ ಬಳಿ ರಾಹುಲ್ ಧರಣಿ
ಇ. ಅಹಮದ್ ಅವರ ನಿಧನ ಬಳಿಕವೂ ಕೇಂದ್ರ ಸರ್ಕಾರ ಬಜೆಟ್ ಮಂಡನೆ ಮಾಡಿದ್ದಕ್ಕೆ ವಿರೋಧ ವ್ಯಕ್ತಪಡಿಸಿ, ಸಂಸತ್ತಿನ ಮಹಾತ್ಮ ಗಾಂಧಿ ಪ್ರತಿಮೆ ಎದಿರು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು...

ನವದೆಹಲಿ: ಇ. ಅಹಮದ್ ಅವರ ನಿಧನ ಬಳಿಕವೂ ಕೇಂದ್ರ ಸರ್ಕಾರ ಬಜೆಟ್ ಮಂಡನೆ ಮಾಡಿದ್ದಕ್ಕೆ ವಿರೋಧ ವ್ಯಕ್ತಪಡಿಸಿ, ಸಂಸತ್ತಿನ ಮಹಾತ್ಮ ಗಾಂಧಿ ಪ್ರತಿಮೆ ಎದಿರು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಧರಣಿ ನಡೆಸುತ್ತಿದ್ದಾರೆ.
ಬಜೆಟ್ ಅಧಿವೇಶನದ ಮೊದಲ ದಿನ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಭಾಷಣ ಮಾಡುತ್ತಿದ್ದ ವೇಳೆಯೇ ಮಾಜಿ ಸಚಿವ ಇ. ಅಹಮದ್ ಅವರು ಹೃದಯಾಘಾತಕ್ಕೆ ಒಳಗಾಗಿ ನಿಧನ ಹೊಂದಿದ್ದರು. ಫೆ.1 ರಂದು ಕೇಂದ್ರ ಬಜೆಟ್ ಮಂಡನೆ ಮಾಡಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿತ್ತು. ಇ. ಅಹಮದ್ ಅವರು ನಿಧರ ಹೊಂದಿರುವ ಹಿನ್ನಲೆಯಲ್ಲಿ ಬಜೆಟ್ ನ್ನು ಮೂಂದೂಡಬೇಕೆಂದು ಆಗ್ರಹಿಸಿದ್ದವು. ಸಾಕಷ್ಟು ವಿರೋಧಗಳ ನಡುವೆಯೂ ಕೇಂದ್ರ ಬಜೆಟ್ ಮಂಡನೆ ಮಾಡಿತ್ತು.
ಇಂದು ಸಂಸತ್ತಿನಲ್ಲಿ ಬಜೆಟ್ ಅಧಿವೇಶನ ಆರಂಭವಾಗಿರುವ ಹಿನ್ನಲೆಯಲ್ಲಿ ಸಂಸತ್ತಿನ ಗಾಂಧಿ ಪ್ರತಿಮೆ ಬಳಿ ಕೇರಳ ರಾಜ್ಯ ಸಂಸದರು ಹಾಗೂ ಕಾಂಗ್ರೆಸ್ ಸಂಸದರು ಧರಣಿ ಕುಳಿತು ಕೇಂದ್ರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರೂ ಕೂಡ ಕೈಜೋಡಿಸಿದ್ದು, ಸಂಸದರು ಬಾಯಿಗೆ ಕಪ್ಪು ಪಟ್ಟಿಯನ್ನು ಧರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


