ತಮಿಳುನಾಡು ಭಾವಿ ಸಿಎಂ ಶಶಿಕಲಾ ಪತಿ ನಟರಾಜನ್ ಆಸ್ಪತ್ರೆಗೆ ದಾಖಲು!
ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲು ಸಿದ್ಧವಾಗಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿಕೆ ಶಶಿಕಲಾ ಅವರ ಪತಿ ಎಂ ನಟರಾಜನ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

Published On :
ಚೆನ್ನೈ: ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲು ಸಿದ್ಧವಾಗಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿಕೆ ಶಶಿಕಲಾ ಅವರ ಪತಿ ಎಂ ನಟರಾಜನ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಉಸಿರಾಟದ ಸಮಸ್ಯೆಯಿಂದ ಎಂ ನಟರಾಜನ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಎಐಎಡಿಎಂಕೆ ಪಕ್ಷ ತಿಳಿಸಿದೆ. " ನಟರಾಜನ್ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಅವರನ್ನು ಕಾರ್ಪೊರೇಟ್ ಆಸ್ಪತ್ರೆಗೆ ದಾಖಲಿಸಲಾಗಿದೆ" ಎಂದಷ್ಟೇ ಎಐಎಡಿಎಂಕೆ ತಿಳಿಸಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೀಡಿಲ್ಲ.
ನಟರಾಜನ್ ಅವರ ಪತ್ನಿ, ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಆಪ್ತೆ ವಿಕೆ ಶಶಿಕಲಾ ಅವರನ್ನು ಫೆ.6 ರಂದು ಎಐಎಡಿಎಂಕೆಯ ಶಾಸಕಾಂಗ ಪಕ್ಷದ ಸಭೆಯಲ್ಲಿ ನಾಯಕಿಯನ್ನಾಗಿ ಆಯ್ಕೆ ಮಾಡಲಾಗಿದ್ದು, ಶಶಿಕಲಾ ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


