ಸಿಎಂ ಆಗಿ ಶಶಿಕಲಾ ಪದಗ್ರಹಣಕ್ಕೆ ತಡೆ ಕೋರಿ ಸುಪ್ರೀಂಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ
ಶಶಿಕಲಾ ನಟರಾಜನ್ ಅವರು ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣವನ ಸ್ವೀಕರಿಸುವುದಕ್ಕೆ ತಡೆ ನೀಡುವಂತೆ ಕೋರಿ ತಮಿಳುನಾಡಿನ ಸಮಾಜಸೇವಾ...

Published On :
ನವದೆಹಲಿ: ಶಶಿಕಲಾ ನಟರಾಜನ್ ಅವರು ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣವನ ಸ್ವೀಕರಿಸುವುದಕ್ಕೆ ತಡೆ ನೀಡುವಂತೆ ಕೋರಿ ತಮಿಳುನಾಡಿನ ಸಮಾಜಸೇವಾ ಸಂಸ್ಥೆ ಸಟ್ಟಾ ಪಂಚಾಯಿತ್ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದೆ.
ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಹಾಗೂ ತಮಿಳುನಾಡಿನ ಭಾವಿ ಸಿಎಂ ಶಶಿಕಲಾ ಅವರ ಅಕ್ರಮ ಆಸ್ತಿ ಪ್ರಕರಣದ ಬಗ್ಗೆ ಸುಪ್ರೀಂ ಕೋರ್ಟ್ ಮುಂದಿನ ವಾರ ತೀರ್ಪು ನೀಡುವ ಸಾಧ್ಯತೆ ಇದ್ದು ಈ ಹಿನ್ನೆಲೆಯಲ್ಲಿ ತೀರ್ಪು ಬರುವವರೆಗೂ ಶಶಿಕಲಾ ಪದಗ್ರಹಣ ಮಾಡುವುದು ಬೇಡ ಎಂದು ಹೇಳಿ ಸಮಾಜಸೇವಾ ಸಂಸ್ಥೆ ಸುಪ್ರೀಂ ಮೆಟ್ಟಿಲೇರಿದೆ.
ಶಶಿಕಲಾ ನಟರಾಜನ್ ಕಳೆದ ಭಾನುವಾರ ತಮಿಳುನಾಡು ಎಐಎಡಿಎಂಕೆ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದರು. ಮುಖ್ಯಮಂತ್ರಿಯಾಗಿ ಶಶಿಕಲಾ ಅಧಿಕಾರ ಸ್ವೀಕಾರ ಕಾರ್ಯಕ್ರಮಕ್ಕೆ ಭರದಿಂದ ಸಿದ್ಧತೆಗಳು ನಡೆಯುತ್ತಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


