ದೇಶ

ಬಿಎಸ್'ಎಫ್ ಗುಂಡೇಟಿಗೆ ಬಲಿಯಾದ ಪಾಕಿಸ್ತಾನ ನುಸುಳುಕೋರ

ಪಠಾಣ್ ಕೋಟ್ ನ ಬಮಿಯಾಲ್ ನಲ್ಲಿರುವ ಭಾರತ ಮತ್ತು ಪಾಕಿಸ್ತಾನ ಅಂತರಾಷ್ಟ್ರೀಯ ಗಡಿಯಲ್ಲಿ ಗಡಿ ನುಸುಳಲು ಯತ್ನಿಸುತ್ತಿದ್ದ ನಸುಳುಕೋರನೊಬ್ಬನನ್ನು ಭಾರತೀಯ ಸೇನೆ...

ಬಿಎಸ್'ಎಫ್ ಗುಂಡೇಟಿಗೆ ಬಲಿಯಾದ ಪಾಕಿಸ್ತಾನ ನುಸುಳುಕೋರ
ಸಂಗ್ರಹ ಚಿತ್ರ
Published On :

ನವದೆಹಲಿ: ಪಠಾಣ್ ಕೋಟ್ ನ ಬಮಿಯಾಲ್ ನಲ್ಲಿರುವ ಭಾರತ ಮತ್ತು ಪಾಕಿಸ್ತಾನ ಅಂತರಾಷ್ಟ್ರೀಯ ಗಡಿಯಲ್ಲಿ ಗಡಿ ನುಸುಳಲು ಯತ್ನಿಸುತ್ತಿದ್ದ ನಸುಳುಕೋರನೊಬ್ಬನನ್ನು ಭಾರತೀಯ ಸೇನೆ ಮಂಗಳವಾರ ಹತ್ಯೆ ಮಾಡಿದೆ.

ಬೆಳಿಗ್ಗೆ 8.15ರ ಸುಮಾರಿಗೆ 50 ಮೀಟರಗಳ ದೂರದ ಅಂತರಾಷ್ಟ್ರೀಯ ಗಡಿ ಭಾಗದಲ್ಲಿ ಅನುಮಾನಾಸ್ಪದ ಓಡಾಟಗಳು ಕಂಡು ಬಂದಿತ್ತು. ಪಾಕಿಸ್ತಾನದ ನುಸುಳುಕೋರರು ಭಾರತದ ಗಡಿ ನುಸುಳಲು ಯತ್ನಿಸುತ್ತಿದ್ದರು. ಈ ವೇಳೆ ಸೇನೆ ಓರ್ವ ನುಸುಳುಕೋರನನ್ನು ಹತ್ಯೆ ಮಾಡಿದೆ ಎಂದು ಗಡಿ ಭದ್ರತಾ ಪಡೆಯ ಅಧಿಕಾರಿ ಹೇಳಿದ್ದಾರೆ.

ಪಠಾಣ್ ಕೋರ್ಟ್ ಬಮಿಯಾಲ್ ಪ್ರದೇಶ ಸಿಂಬಲ್ ಗಡಿಯಲ್ಲಿ ಪಾಕಿಸ್ತಾನ ನುಸುಳುಕೋರನನ್ನು ಹತ್ಯೆ ಮಾಡಲಾಗಿದೆ. ನುಸುಳುಕೋರನನ್ನು ಹತ್ಯೆ ಮಾಡಿದ ಸ್ಥಳದಲ್ಲಿ ಮಂಜು ಆವರಿಸಿದ್ದು, ಮೃತದೇಹವನ್ನು ಹೊರ ತರಲು ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.