ಪಂಜಾಬ್: 48 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಚುನಾವಣಾ ಆಯೋಗ ಆದೇಶ
ಇದೇ ಫೆಬ್ರವರಿ 4ರಂದು ಪಂಜಾಬ್ ನಲ್ಲಿ ನಡೆದಿದ್ದ ವಿಧಾನಸಭಾ ಚುನಾವಣೆಯ ಮತದಾನದ ವೇಳೆ ದೋಷ ಕಂಡುಬಂದ ಹಿನ್ನಲೆಯಲ್ಲಿ 48 ಮತಗಟ್ಟೆಗಳಲ್ಲಿ ಮರು ಮತದಾನ ನಡೆಸುವಂತೆ...

ಚಂಡೀಘಡ: ಇದೇ ಫೆಬ್ರವರಿ 4ರಂದು ಪಂಜಾಬ್ ನಲ್ಲಿ ನಡೆದಿದ್ದ ವಿಧಾನಸಭಾ ಚುನಾವಣೆಯ ಮತದಾನದ ವೇಳೆ ದೋಷ ಕಂಡುಬಂದ ಹಿನ್ನಲೆಯಲ್ಲಿ 48 ಮತಗಟ್ಟೆಗಳಲ್ಲಿ ಮರು ಮತದಾನ ನಡೆಸುವಂತೆ ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಆದೇಶಿಸಿದೆ.
ಚುನಾವಣಾ ಆಯೋಗದ ಮೂಲಗಳು ತಿಳಿಸಿರುವಂತೆ ಇದೇ ಫೆಬ್ರವರಿ 9ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಗಳವರೆಗೂ 48 ಮತಗಟ್ಟೆಗಳಲ್ಲಿ ಮರು ಮತದಾನ ನಡೆಯಲಿದೆ ಎಂದು ತಿಳಿದುಬಂದಿದೆ. ಈ ಪೈಕಿ ಅಮೃತಸರದ 16 ಮತಗಟ್ಟೆ, ಮಜಿತಾದ 12, ಮೋಗಾದ ಒಂದು, ಮುಖ್ತಸರ್ ನ 9, ಸಾರ್ದುಲ್ ಘಡ್ ನ 6 ಮತ್ತು ಸಂಗ್ರೂರ್ ನ 6 ಮತಗಟ್ಟೆಗಳಲ್ಲಿ ಫೆಬ್ರವರಿ 9ರಂದು ಮರು ಮತದಾನ ನಡೆಯಲಿದೆ.
ಈ ಹಿಂದೆ ಫೆಬ್ರವರಿ 4ರಂದು ನಡೆದಿದ್ದ ಮತದಾನದ ವೇಳೆ ಸಾಕಷ್ಟು ಗೊಂದಲಮಯ ವಾತಾವರಣ ನಿರ್ಮಾಣವಾಗಿತ್ತು. ಮತದಾರರ ಪಟ್ಟಿಯಲ್ಲಿ ದೋಷ ಹಾಗೂ ಮತಯಂತ್ರದಲ್ಲಿನ ದೋಷದಿಂದಾಗಿ ಮತದಾನಕ್ಕೆ ಅಡ್ಡಿಯಾಗಿತ್ತು. ಹೀಗಾಗಿ ಕೇಂದ್ರ ಚುನಾವಣಾ ಆಯೋಗ ಈ ಭಾಗಗಳಲ್ಲಿ ಮರು ಮತದಾನಕ್ಕೆ ಆದೇಶ ನೀಡಿದೆ. ಈ ಹಿಂದೆ ನಡೆದ ಮತದಾನದ ವೇಳೆ ಚುನಾವಣಾ ಆಯೋಗ ಮತದಾನಕ್ಕಾಗಿ 24,697 ಮತ ಯಂತ್ರ ಹಾಗೂ 24,256 ನಿಯಂತ್ರಕಗಳನ್ನು ಬಳಕೆ ಮಾಡಿಕೊಂಡಿತ್ತು. ಈ ಪೈಕಿ 180 ಮತಯಂತ್ರ ಹಾಗೂ 184 ನಿಯಂತ್ರಕಗಳು ತಾಂತ್ರಿಕ ದೋಷದಿಂದಾಗಿ ಸ್ಥಗಿತಗೊಂಡಿದ್ದವು.
ಪಂಜಾಬ್ ನ ಒಟ್ಟು 117 ವಿಧಾನಸಭಾ ಕ್ಷೇತ್ರಗಳಿಗೆ ಮತದಾನವಾಗಿದ್ದು, ಫೆಬ್ರವರಿ 9ರಂದು ನಡೆಯಲಿರುವ ಮತದಾನವೂ ಸೇರಿದಂತೆ ಫಲಿತಾಂಶ ಮುಂಬರುವ ಮಾರ್ಚ್ 11ರಂದು ಪ್ರಕಟವಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


