ದೇಶ

ಶಿಕ್ಷಕರನ್ನು ಹಸುಗಳಿಗೆ ಹೋಲಿಸಿದ ಪಶ್ಚಿಮ ಬಂಗಾಳ ಶಿಕ್ಷಣ ಸಚಿವ

ಶಾಲಾ ಶಿಕ್ಷಕರನ್ನು ಹಸುಗಳಿಗೆ ಹೋಲಿಕೆ ಮಾಡುವ ಮೂಲಕ ಪಶ್ಚಿಮ ಬಂಗಾಳ ಶಿಕ್ಷಣ ಸಚಿವ ಪಾರ್ಥ ಚಟರ್ಜಿ ಬಿಸಿಬಿಸಿ ಚರ್ಚೆಗೆ ...

ಶಿಕ್ಷಕರನ್ನು ಹಸುಗಳಿಗೆ ಹೋಲಿಸಿದ ಪಶ್ಚಿಮ ಬಂಗಾಳ ಶಿಕ್ಷಣ ಸಚಿವ
ಪಾರ್ಥ ಚಟರ್ಜಿ
Published On :

ಕೊಲ್ಕೋತಾ:  ಶಾಲಾ ಶಿಕ್ಷಕರನ್ನು ಹಸುಗಳಿಗೆ ಹೋಲಿಕೆ ಮಾಡುವ ಮೂಲಕ ಪಶ್ಚಿಮ ಬಂಗಾಳ ಶಿಕ್ಷಣ ಸಚಿವ ಪಾರ್ಥ ಚಟರ್ಜಿ ಬಿಸಿಬಿಸಿ ಚರ್ಚೆಗೆ ಕಾರಣವಾಗಿದ್ದಾರೆ.

ಹಸುಗಳ ಹಾಜರಾತಿಗಾಗಿ ಶೀಘ್ರವೇ ಬಯೋಮೆಟ್ರಿಕ್ ವ್ಯವಸ್ಥೆ ಜಾರಿಗೊಳಿಸಲಾಗುವುದು, ಇದರಿಂದ ಹಸುಗಳನ್ನು ಕೊಟ್ಟಿಗೆಯೊಳಗೆ ಕೂಡಿಹಾಕಲು ಸಹಾಯವಾಗುತ್ತದೆ ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳದ ಕಾಲೇಜು ಶಿಕ್ಷಕರ ಅಸೋಸಿಯೇಷನ್ ಹಮ್ಮಿಕೊಂಡಿದ್ದ 45 ನೇ ಸೆಮಿನಾರ್ ನಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ಹೊಸ ಬಯೋ ಮೆಟ್ರಿಕ್ ಸಿಸ್ಟಮ್ ಗೆ ಒಳ್ಳೆಯ ಹಸುಗಳು ವಿರೋಧ ವ್ಯಕ್ತ ಪಡಿಸುವುದಿಲ್ಲ ಎಂದು ಹೇಳಿದ್ದಾರೆ.

ಮಮತಾ ಬ್ಯಾನರ್ಜಿ ಸರ್ಕಾರ ಫೆಬ್ರವರಿ 8 ರಂದು ಉನ್ನತ ಶಿಕ್ಷಣ ಮಸೂದೆ ಮಂಡಿಸುತ್ತಿದ್ದು ಅದರಲ್ಲಿ ಬಯೋ ಮೆಟ್ರಿಕ್ ವ್ಯವಸ್ಥೆ ಕೂಡ ಪ್ರಮುಖವಾಗಿದೆ. ಸರ್ಕಾರದ ಈ ನಿರ್ಧಾರದ ವಿರುದ್ಧ ಶಿಕ್ಷಕರು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಶಿಕ್ಷಣ ಸಚಿವರ ಈ ಹೇಳಿಕೆಯಿಂದಾಗಿ ಹಲವು ಶಿಕ್ಷಕರಿಗೆ ಆಘಾತ ಉಂಟಾಗಿದೆ.

ಸಚಿವರು ಹೇಗೆ  ನಮ್ಮನ್ನು ಹಸುಗಳ ಜೊತೆ  ಹೊಲಿಸಿದ್ದಾರೆ, ಸರ್ಕಾರದ ಈ ನಿಯಮದ ವಿರುದ್ಧ ಹೋರಾಡಲು ನಮಗೆ ಯಾವುದೇ ಅಧಿಕಾರವಿಲ್ಲವೇ ಎಂದು ಸಮ್ಮೇಳನದಲ್ಲಿ ಭಾಗವಹಿಸಿದ್ದ ಶಿಕ್ಷಕರೊಬ್ಬರು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.