ದೇಶ

ಜಾರಿ ನಿರ್ದೇಶನಾಲಯದ ನಿರ್ದೇಶಕರಾಗಿ ಕರ್ನಲ್ ಸಿಂಗ್ ಮುಂದುವರಿಕೆ

ಜಾರಿ ನಿರ್ದೇಶನಾಲಯದ ನಿರ್ದೇಶಕರಾಗಿ ಐಪಿಎಸ್ ಅಧಿಕಾರಿ ಕರ್ನಲ್ ಸಿಂಗ್ ಅವರನ್ನು ಮುಂದುವರೆಸಲಾಗಿದೆ. ಕೇಂದ್ರ ಸರ್ಕಾರ ಫೆ.8 ರಂದು ಈ ಕುರಿತು ಅಧಿಕೃತ ಆದೇಶ ಹೊರಡಿಸಿದೆ.

ಜಾರಿ ನಿರ್ದೇಶನಾಲಯದ ನಿರ್ದೇಶಕರಾಗಿ ಕರ್ನಲ್ ಸಿಂಗ್ ಮುಂದುವರಿಕೆ
ಕರ್ನಲ್ ಸಿಂಗ್
Published On :
ನವದೆಹಲಿ: ಜಾರಿ ನಿರ್ದೇಶನಾಲಯದ ನಿರ್ದೇಶಕರಾಗಿ ಐಪಿಎಸ್ ಅಧಿಕಾರಿ ಕರ್ನಲ್ ಸಿಂಗ್ ಅವರನ್ನು ಮುಂದುವರೆಸಲಾಗಿದೆ. ಕೇಂದ್ರ ಸರ್ಕಾರ ಫೆ.8 ರಂದು ಈ ಕುರಿತು ಅಧಿಕೃತ ಆದೇಶ ಹೊರಡಿಸಿದೆ. 
ಕ್ಯಾಬಿನೆಟ್ ನ ನೇಮಕಾತಿ ಸಮಿತಿ ಕರ್ನಲ್ ಸಿಂಗ್ ಅವರ ನೇಮಕಾತಿಗೆ ಅನುಮೋದನೆ ನೀಡಿದ್ದು, ಇನ್ನು 2 ವರ್ಷಗಳ ಕಾಲ ನಿರ್ದೇಶಕರ ಹುದ್ದೆಯಲ್ಲಿ ಮುಂದುವರೆಸಲು ಆದೇಶ ನೀಡಲಾಗಿದೆ. 1984 ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದ ಕರ್ನಲ್ ಸಿಂಗ್ ಅವರನ್ನು 2016 ರಲ್ಲಿ ಜಾರಿ ನಿರ್ದೇಶನಾಲಯದ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿತ್ತು. ಆಗಸ್ಟ್ ನಲ್ಲಿ ನಿವೃತ್ತರಾಗಬೇಕಿದ್ದ ಕರ್ನಲ್ ಸಿಂಗ್ ಅವರನ್ನು ಈಗ 2 ವರ್ಷಗಳ ಕಾಲ ಅದೇ ಹುದ್ದೆಯಲ್ಲಿ ಮುಂದುವರೆಸಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. 
ಕೇಂದ್ರ ವಿಚಕ್ಷಣಾ ಆಯೋಗ(ಸಿವಿಸಿ) ಕಾಯ್ದೆಯ ಪ್ರಕಾರ ಹಾಲಿ ನಿರ್ದೇಶಕರನ್ನು ಕನಿಷ್ಠ 2 ವರ್ಷಗಳ ಕಾಲ ಮುಂದುವರೆಸುವ ಬಗ್ಗೆ ಹೊಸ ಅಧಿಸೂಚನೆ ಹೊರಡಿಸಬೇಕೆಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.