ಏಕಕಾಲಕ್ಕೆ ಚುನಾವಣೆ: ಪ್ರಸ್ತಾವನೆ ಪರಿಗಣಿಸುವಂತೆ ರಾಜಕೀಯ ಪಕ್ಷಗಳಿಗೆ ಮೋದಿ ಮನವಿ
ವಿಧಾನಸಭಾ, ಲೋಕಸಭಾ ಚುನಾವಣೆಗಳನ್ನು ಏಕಕಾಲಕ್ಕೆ ನಡೆಸುವ ಪ್ರಸ್ತಾವನೆಯನ್ನು ಪರಿಗಣಿಸುವಂತೆ ರಾಜಕೀಯ ಪಕ್ಷಗಳನ್ನು ಪ್ರಧಾನಿ ನರೇಂದ್ರ ಮೋದಿ ಕೇಳಿದ್ದಾರೆ.

Published On :
ನವದೆಹಲಿ: ವಿಧಾನಸಭಾ, ಲೋಕಸಭಾ ಚುನಾವಣೆಗಳನ್ನು ಏಕಕಾಲಕ್ಕೆ ನಡೆಸುವ ಪ್ರಸ್ತಾವನೆಯನ್ನು ಪರಿಗಣಿಸುವಂತೆ ರಾಜಕೀಯ ಪಕ್ಷಗಳನ್ನು ಪ್ರಧಾನಿ ನರೇಂದ್ರ ಮೋದಿ ಕೇಳಿದ್ದಾರೆ.
ರಾಜಕೀಯ ಪರಿಗಣನೆಯನ್ನು ಮೀರಿ ಏಕಕಾಲಕ್ಕೆ ಚುನಾವಣೆ ನಡೆಸುವ ಸಂಬಂಧ ಎಲ್ಲಾ ಪಕ್ಷಗಳು ಚಿಂತನೆ ನಡೆಸಬೇಕಿವೆ ಎಂದು ಮೋದಿ ಅಭಿಪ್ರಾಯಪಟ್ಟಿದ್ದು, ಶೈಕ್ಷಣಿಕ ಕ್ಷೇತ್ರಕ್ಕೆ ಉಂಟಾಗಬಹುದಾದ ಸಮಸ್ಯೆ, ಸರ್ಕಾರಿ ಸಿಬ್ಬಂದಿಗಳ ಬಳಕೆ, ಅತಿ ಹೆಚ್ಚು ಖರ್ಚು ಸೇರಿದಂತೆ ಬೇರೆ ಬೇರೆ ಸಮಯಗಳಲ್ಲಿ ಚುನಾವಣೆಗಳನ್ನು ಎದುರಿಸಿದರೆ ಉಂಟಾಗಬಹುದಾದ ಸಮಸ್ಯೆ, ಹೊರೆಯ ಬಗ್ಗೆ ಉಲ್ಲೇಖಿಸಿದ್ದಾರೆ.
ಒಂದು ಪಕ್ಷ ಅಥವಾ ಒಂದು ಸರ್ಕಾರದಿಂದ ಇದನ್ನು ಮಾಡಲು ಸಾಧ್ಯವಿಲ್ಲ. ಏಕಕಾಲಕ್ಕೆ ಚುನಾವಣೆ ನಡೆಸುವ ಪ್ರಕ್ರಿಯೆಯಿಂದ ನಮಗೂ ಸೇರಿದಂತೆ ಎಲ್ಲರಿಗೂ ಅಲ್ಪ ಪ್ರಮಾಣದ ನಷ್ಟ ಉಂಟಾಗಲಿದೆ. ಆದರೆ ಇದನ್ನು ರಾಜಕೀಯ ದೃಷ್ಟಿಕೋನದಿಂದ ನೋಡಬಾರದು ಎಂದು ಮೋದಿ ರಾಜಕೀಯ ಪಕ್ಷಗಳಿಗೆ ಕರೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


