ದೇಶ

ರೈಲು ಅಪಘಾತದ ಹಿಂದೆ ಅಕ್ರಮ ಚಟುವಟಿಕೆಗಳು ವರದಿಯಾಗಿವೆ: ಸುರೇಶ್ ಪ್ರಭು

ಕಳೆದ ಕೆಲ ದಿನಗಳಲ್ಲಿ ಅಸಹಜ ಚಟುವಟಿಕೆಗಳು ನಡೆದ ಬಗ್ಗೆ ವರದಿಯಾಗಿದ್ದು, ಇದಕ್ಕೆ ತೀವ್ರ ಕಳವಳ...

ರೈಲು ಅಪಘಾತದ ಹಿಂದೆ ಅಕ್ರಮ ಚಟುವಟಿಕೆಗಳು ವರದಿಯಾಗಿವೆ: ಸುರೇಶ್ ಪ್ರಭು
ರೈಲ್ವೆ ಖಾತೆ ಸಚಿವ ಸುರೇಶ್ ಪ್ರಭು
Published On :
ನವದೆಹಲಿ: ಕಳೆದ ಕೆಲ ದಿನಗಳಲ್ಲಿ ಅಸಹಜ ಚಟುವಟಿಕೆಗಳು ನಡೆದ ಬಗ್ಗೆ ವರದಿಯಾಗಿದ್ದು, ಇದಕ್ಕೆ ತೀವ್ರ ಕಳವಳ ವ್ಯಕ್ತಪಡಿಸಿರುವ ಸರ್ಕಾರ, ರೈಲ್ವೆ ಹಳಿಯನ್ನು ನಾಶಗೊಳಿಸುವ ಮತ್ತು ಸ್ಫೋಟಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ.
ಲೋಕಸಭೆಯಲ್ಲಿಂದು ಪ್ರಶ್ನೆಗೆ ಉತ್ತರಿಸಿದ ಅವರು, ಏಳು ಸ್ಫೋಟ ಪ್ರಯತ್ನಗಳು ಮತ್ತು ಮೂರು ಕಡೆಗಳಲ್ಲಿ ರೈಲ್ವೆ ಹಳಿಗಳನ್ನು ನಾಶಗೊಳಿಸುವ ಪ್ರಯತ್ನ ನಡೆದಿದೆ ಎಂದು ಹೇಳಿದ್ದಾರೆ.
ಉತ್ತರ ಪ್ರದೇಶದ ಕಾನ್ಪುರದಲ್ಲಿ ಹಳಿಗಳನ್ನು ನಾಶಗೊಳಿಸಿದ ಘಟನೆಗೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಈಗಾಗಲೇ ತನಿಖೆ ನಡೆಸುತ್ತಿದೆ. ಕೆಲವು ಅಕ್ರಮ ಚಟುವಟಿಕೆಗಳನ್ನು ರೈಲ್ವೆ ಸಿಬ್ಬಂದಿಯ ಮುನ್ನೆಚ್ಚರಿಕೆಯಿಂದ ತಪ್ಪಿಸಲಾಗಿದೆ ಎಂದು ಪ್ರಶ್ನೋತ್ತರ ವೇಳೆಯಲ್ಲಿ ಉತ್ತರಿಸಿದರು.
ಇತ್ತೀಚಿನ ರೈಲು ಹಳಿಗಳ ನಾಶದ ನಂತರ ಜಪಾನ್, ದಕ್ಷಿಣ ಕೊರಿಯಾ ಮತ್ತು ಇಟೆಲಿಗಳಿಂದ ತಂಡಗಳು ಆಗಮಿಸಿವೆ. ಪ್ರಧಾನಿಯವರ ರಾಜತಾಂತ್ರಿಕ ಕುಶಲತೆಗೆ ಧನ್ಯವಾದಗಳು ಎಂದರು.
ತಂತ್ರಜ್ಞಾನದ ಹೊರತಾಗಿ ರೈಲ್ವೆ ಸುರಕ್ಷಾ ಪಡೆಯನ್ನು  ನ್ಯಾಯ ತಂತ್ರ ವಿಕಸನಕ್ಕೆ ಕೋರಲಾಗಿದೆ ಎಂದು ಸಚಿವ ಸುರೇಶ್ ಪ್ರಭು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.