ಪ್ರಧಾನಿ ಮೋದಿಗೆ ಅಗೌರವ ತೋರಿದ್ದಕ್ಕೆ ಕಾಂಗ್ರೆಸ್ ಕ್ಷಮೆಯಾಚಿಸಬೇಕು: ಬಿಜೆಪಿ
ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಸಂಸತ್ತಿಗೆ ಕಾಂಗ್ರೆಸ್ ಆಗೌರವವನ್ನೂ ಸೂಚಿಸುತ್ತಿದ್ದು, ಕೂಡಲೇ ಬೇಷರತ್ ಕ್ಷಮೆಯಾಚಿಸಬೇಕೆಂದು ಭಾರತೀಯ ಜನತಾ ಪಕ್ಷ ಗುರುವಾರ ಹೇಳಿದೆ...

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಸಂಸತ್ತಿಗೆ ಕಾಂಗ್ರೆಸ್ ಆಗೌರವವನ್ನೂ ಸೂಚಿಸುತ್ತಿದ್ದು, ಕೂಡಲೇ ಬೇಷರತ್ ಕ್ಷಮೆಯಾಚಿಸಬೇಕೆಂದು ಭಾರತೀಯ ಜನತಾ ಪಕ್ಷ ಗುರುವಾರ ಹೇಳಿದೆ.
ಉಭಯ ಸದನಗಳಲ್ಲಿ ಉಂಟಾಗಿರುವ ಗದ್ದಲ ಹಿನ್ನಲೆಯಲ್ಲಿ ಕಾಂಗ್ರೆಸ್ ವಿರುದ್ಧ ಕಿಡಿಕಾಡಿರುವ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರು, ಕಾಂಗ್ರೆಸ್ ನಾಯಕರು ಸಂಸತ್ತು ಹಾಗೂ ಪ್ರಧಾನಮಂತ್ರಿಗಳಿಗೆ ಅಗೌರವವನ್ನು ಸೂಚಿಸುತ್ತಿದ್ದು, ಕೂಡಲೇ ಬೇಷರತ್ ಕ್ಷಮೆಯಾಚಿಸಬೇಕೆಂದು ಹೇಳಿದ್ದಾರೆ.
ಕಾಂಗ್ರೆಸ್ ನಾಯಕರು ಸಂಸತ್ತಿಗಾಗಲೀ, ಪ್ರಧಾನಮಂತ್ರಿಗಾಗಲೀ ಗೌರವವನ್ನು ಸೂಚಿಸುತ್ತಿಲ್ಲ. ಬಾಯಿಗೆ ಬಂದಂತೆ ಹೇಳಿಕೆಗಳನ್ನು ನೀಡಿ, ಉಭಯ ಸದನಗಳಲ್ಲಿ ಗದ್ದವನ್ನುಂಟು ಮಾಡುತ್ತಿದ್ದಾರೆ. ಕಾಂಗ್ರೆಸ್ ಅಗೌರವ ಸೂಚಿಸುತ್ತಿರುವುದು ಇದು ಮೊದಲೇನಲ್ಲ. ಈ ಹಿಂದೆ ಕೂಡ ಇದೇ ರೀತಿಯಾಗಿ ನಡೆದುಕೊಂಡಿತ್ತು. ಪ್ರಧಾನಮಂತ್ರಿಗಳನ್ನು ಕೇವಲ ದೇಶದಲ್ಲಿ ಅಷ್ಟೇ ಅಲ್ಲ, ಇಡೀ ವಿಶ್ವದಾದ್ಯಂತ ಗೌರವಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಸದನದಲ್ಲಿ ನಾಯಕರು ಪ್ರಧಾನಮಂತ್ರಿಗಳ ಹೆಸರನ್ನು ಹಲವು ಬಾರಿ ಕರೆದಿದ್ದಾರೆ. ಮೋದಿಯವರನ್ನು ಹಿಟ್ಲರ್, ಮುಸೊಲಿನಿ ಮತ್ತು ಗಡ್ಡಾಫಿ ಎಂದು ಕರೆದಿದ್ದಾರೆ. ಅಲ್ಲದೆ, ಮೋದಿಯವರ ವಿರುದ್ಧ ಸಾಕಷ್ಟುಅಸಂಬದ್ಧ ಹೇಳಿಕೆಗಳನ್ನು ನೀಡಿದ್ದಾರೆ. ವಾಸ್ತವಿಕ ಪರಿಸ್ಥಿತಿಯನ್ನು ವಿರೋಧ ಪಕ್ಷಗಳು ಅರ್ಥ ಮಾಡಿಕೊಳ್ಳದೇ ಇರುವುದು ನಿಜಕ್ಕೂ ನಾಚಿಕೆಗೇಡಿತನ. ವಿಷಯವಲ್ಲದ ವಿಚಾರಗಳನ್ನು ವಿರೋಧ ಪಕ್ಷಗಳು ವಿಷಯ ಮಾಡುತ್ತಿವೆ. ಇದಕ್ಕೆ ಪ್ರಧಾನಿ ಮೋದಿಯವರು ಕ್ಷಮೆಯಾಚಿಸುವಂತೆ ಆಗ್ರಹಿಸುತ್ತಿದ್ದಾರೆ. ಮೋದಿಯವರೇಕೆ ಕ್ಷಮೆಯಾಚಿಸಬೇಕು ಎಂದು ಪ್ರಶ್ನಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಉತ್ತಮವಾದ ಕೆಲಸವನ್ನು ಮಾಡುತ್ತಿದ್ದು, ಸದನಕ್ಕೆ ಅರ್ಥಪೂರ್ಣವಾದ ಹಾಗೂ ನಿರ್ಮಾಣಾತ್ಮಕ ಮಧ್ಯಸ್ಥಿಕೆಯನ್ನು ವಹಿಸಿದ್ದಾರೆ.
ಡಾ. ಮನಮೋಹನ್ ಸಿಂಗ್ ಅವರು ಮಾಡಿದ್ದ ಕೆಲಸವನ್ನು ಮೋದಿಯವರು ಶ್ಲಾಘಿಸಿದ್ದಾರೆ. ಈ ಶ್ಲಾಘನೆಯನ್ನು ಕಾಂಗ್ರೆಸ್ ಒಪ್ಪಿಕೊಳ್ಳದಿದ್ದರೆ, ಅದಕ್ಕೆ ನಾವು ಏನನ್ನೂ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


