ಮನಮೋಹನ್ ಸಿಂಗ್ ವಿರುದ್ಧ ಪ್ರಧಾನಿ ರೈನ್ ಕೋಟ್ ಹೇಳಿಕೆ: ಇಂದು ಕೂಡ ಸದನದಲ್ಲಿ ಕೋಲಾಹಲ
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನಿನ್ನೆ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಿರುದ್ಧ ನೀಡಿರುವ...

Published On :
ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನಿನ್ನೆ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಿರುದ್ಧ ನೀಡಿರುವ ಮಳೆಯಂಗಿ ಹೇಳಿಕೆ ಇಂದು ಸಂಸತ್ತಿನ ಉಭಯ ಸದನಗಳಲ್ಲಿ ತೀವ್ರ ಗದ್ದಲ, ಕೋಲಾಹಲಕ್ಕೆ ಕಾರಣವಾಯಿತು. ಖಂಡಿಸಿ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಸಂಸತ್ತಿನ ಎರಡೂ ಸದನಗಳಲ್ಲಿ ತೀವ್ರ ಕೋಲಾಹಲವೆಬ್ಬಿಸಿದ್ದು ಕಲಾಪವನ್ನು 11.30ಕ್ಕೆ ಮುಂದೂಡಲಾಯಿತು.
ಕಾಂಗ್ರೆಸ್ ಹಿರಿಯ ನಾಯಕ ಆನಂದ್ ಶರ್ಮಾ ಪ್ರಧಾನಿ ಹೇಳಿಕೆಯನ್ನು ಖಂಡಿಸಿ ಅದು ನಾಚಿಕೆಗೇಡಿನ ಮಾತು ಎಂದು ಕರೆದಿದ್ದಾರೆ. ವಿರೋಧ ಪಕ್ಷಗಳಾದ ಸಿಪಿಐಎಂ, ಎಐಎಡಿಎಂಕೆ ಮತ್ತು ಟಿಎಂಸಿ ಪಕ್ಷದ ಸದಸ್ಯರು ಕೂಡ ಕಾಂಗ್ರೆಸ್ ಸದಸ್ಯರ ಜೊತೆ ಸೇರಿ ಪ್ರತಿಭಟನೆ ನಡೆಸಿದರು.
ರಾಜ್ಯಸಭೆಯಲ್ಲಿ ಸದನದ ಬಾವಿಗಿಳಿದ ವಿರೋಧ ಪಕ್ಷದ ಸದಸ್ಯರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.ತೀವ್ರ ಗದ್ದಲ, ಕೋಲಾಹಲವುಂಟಾದ ಕಾರಣ ಲೋಕಸಭೆಯನ್ನು 11.30ಕ್ಕೆ ಮತ್ತು ರಾಜ್ಯಸಭೆಯನ್ನು 12 ಗಂಟೆಯವರೆಗೆ ಮುಂದೂಡಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿRaincoatparliament sessionಸಂಸತ್ತು ಕಲಾಪDr.Manamohan Singhಡಾ.ಮನಮೋಹನ್ ಸಿಂಗ್ರೈನ್ ಕೋಟ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


