ಉತ್ತರ ಪ್ರದೇಶ, ದೇಶ ಲೂಟಿ ಮಾಡಿದ ಎರಡು ಕುಟುಂಬಗಳ ಬಗ್ಗೆ ಎಚ್ಚರದಿಂದಿರಿ: ಮೋದಿ
ಕುಟುಂಬ ರಾಜಕೀಯ ಮತ್ತು ಕಾನೂನು ಸುವ್ಯವಸ್ಥೆ ಗುರಿಯಾಗಿಸಿಕೊಂಡು ಸಮಾಜವಾದಿ ಪಾರ್ಟಿ ಹಾಗೂ ಕಾಂಗ್ರೆಸ್ ಮೈತ್ರಿ ವಿರುದ್ಧ...

Published On :
ಬಿಜ್ನೋರ್: ಕುಟುಂಬ ರಾಜಕೀಯ ಮತ್ತು ಕಾನೂನು ಸುವ್ಯವಸ್ಥೆ ಗುರಿಯಾಗಿಸಿಕೊಂಡು ಸಮಾಜವಾದಿ ಪಾರ್ಟಿ ಹಾಗೂ ಕಾಂಗ್ರೆಸ್ ಮೈತ್ರಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೊದಿ ಅವರು, ಎರಡು ಕುಟುಂಬಗಳು ಉತ್ತರ ಪ್ರದೇಶ ಮತ್ತು ದೇಶವನ್ನು ಲೂಟಿ ಮಾಡಿದ್ದು, ಈ ಬಗ್ಗೆ ಜನರು ಎಚ್ಚರದಿಂದಿರಬೇಕು ಎಂದು ಶುಕ್ರವಾರ ಹೇಳಿದ್ದಾರೆ.
ಇಂದು ಬಿಜ್ನೋರ್ ನಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಮೋದಿ, ಎರಡು ಕುಟುಂಬಗಳು ಪ್ರತ್ಯೇಕ ಸಂದರ್ಭಗಳಲ್ಲಿ ದೇಶ ಮತ್ತು ಉತ್ತರ ಪ್ರದೇಶವನ್ನು ನಾಶ ಮಾಡಿವೆ. ಒಬ್ಬರು ಉತ್ತರ ಪ್ರದೇಶವನ್ನು ನಾಶ ಮಾಡಿದರೆ, ಮತ್ತೊಬ್ಬರು ದೇಶವನ್ನು ನಾಶ ಮಾಡಿದರು. ಈಗ ಆ ಎರಡೂ ಕೈಗಳು ಸೇರಿದರೆ ಏನಾಗುತ್ತದೆ ಎಂದು ಯೋಚಿಸಿ ಎಂದು ಮತದಾರರ ಮುಂದೆ ಪ್ರಶ್ನೆಯನ್ನಿಟ್ಟರು. ಅಲ್ಲದೆ ಕಾಂಗ್ರೆಸ್ನ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಬಾಲಿಷ ವರ್ತನೆ ಕುರಿತು ಹಲವು ನಗೆ ಚಟಾಕಿಗಳನ್ನೂ ಹರಿಯಬಿಟ್ಟರು.
ಸರ್ಕಾರದ ದುರಾಡಳಿತದಿಂದ ಜನ ತತ್ತರಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ. ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಮಾಡಿದ ಸಾಲ ತೀರಿಸಲಾಗದೆ ರೈತರು ಆತ್ಮಹತ್ಯೆ ದಾರಿ ಹಿಡಿಯುವ ಸ್ಥಿತಿ ನಿರ್ಮಾಣವಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಬಿಜೆಪಿಯನ್ನು ಅಧಿಕಾರಕ್ಕೆ ತಂದರೆ ನಮ್ಮ ಸರ್ಕಾರ ರೈತರ ಸಂಕಷ್ಟಕ್ಕೆ ಸ್ಪಂದಿಸಲಿದೆ. ಕಬ್ಬು ಬೆಳೆಗಾರರ ಬಾಕಿ ಪಾವತಿಗೆ ಕ್ರಮ ಕೈಗೊಳ್ಳಲಾಗುವುದು. ಸಣ್ಣ ಮತ್ತು ಅತಿ ಸಣ್ಣ ರೈತರ ಹಿತ ಕಾಯಲು ಸಾಲಾ ಮನ್ನಾ ಮಾಡಲಾಗುವುದು ಎಂದು ಮೋದಿ ಭರವಸೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿUttar pradeshಉತ್ತರ ಪ್ರದೇಶಸಮಾಜವಾದಿ ಪಕ್ಷSamajwadi Party-Congress allianceಕಾಂಗ್ರೆಸ್ ಮೈತ್ರಿ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


