ಆಪ್ ಸರ್ಕಾರಕ್ಕೆ 2 ವರ್ಷ: ಬಿಜೆಪಿಯಿಂದ ರಿಯಾಲಿಟಿ ಚೆಕ್ ಯಾತ್ರಾ
ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದು 2 ವರ್ಷಗಳು ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ಸರ್ಕಾರದ ಸಾಧನೆಗಳನ್ನು ಅಳೆಯಲು ಬಿಜೆಪಿ ರಿಯಾಲಿಟಿ ಚೆಕ್ ಯಾತ್ರ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

Published On :
ನವದೆಹಲಿ: ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದು 2 ವರ್ಷಗಳು ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ಸರ್ಕಾರದ ಸಾಧನೆಗಳನ್ನು ಅಳೆಯಲು ಬಿಜೆಪಿ ರಿಯಾಲಿಟಿ ಚೆಕ್ ಯಾತ್ರ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ರಿಯಾಲಿಟಿ ಯಾತ್ರಾ ಬಗ್ಗೆ ಮಾತನಾಡಿರುವ ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ, ಬಿಜೆಪಿ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಆಮ್ ಆದ್ಮಿ ಪಕ್ಷದ ಸರ್ಕಾರದ 2 ವರ್ಷಗಳ ಸಾಧನೆಯನ್ನು ಅಳೆದು ಜನರ ಮುಂದೆ ಇಡಲಾಗುತ್ತದೆ ಎಂದು ತಿಳಿಸಿದ್ದಾರೆ.
ದೆಹಲಿ ಬಿಜೆಪಿ ಪದಾಧಿಕಾರಿಗಳು, ಸಂಸದರು, ಶಾಸಕರು ರಿಯಾಲಿಟಿ ಚೆಕ್ ಯಾತ್ರಾದಲ್ಲಿ ಭಾಗವಹಿಸಲಿದ್ದಾರೆ. ದೆಹಲಿ ಬಿಜೆಪಿ ಘಟಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದಾಗಿನಿಂದ ಮನೋಜ್ ತಿವಾರಿ ದೆಹಲಿ ಸರ್ಕಾರದ ವಿರುದ್ಧ ಆಕ್ರಮಣಕಾರಿ ಪ್ರಚಾರ ನಡೆಸುತ್ತಿದ್ದಾರೆ.
5 ತಿಂಗಳಲ್ಲಿ ದೆಹಲಿ ಪುರಸಭೆಯ ಚುನಾವಣೆ ನಡೆಯಲಿದ್ದು, ಬಿಜೆಪಿಯ ರಿಯಾಲಿಟಿ ಚೆಕ್ ಯಾತ್ರಾ ಕಾರ್ಯಕ್ರಮ ಚುನಾವಣಾ ತಯಾರಿಯ ಭಾಗವಾಗಿದೆ ಎಂದೂ ವಿಶ್ಲೇಷಿಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


