ದೇಶ

ಜೂ.30ರ ಬಳಿಕ ಪಡಿತರ ಪಡೆಯಲು ಆಧಾರ್ ಕಡ್ಡಾಯ: ಕೇಂದ್ರ ಸರ್ಕಾರ

ಎಲ್'ಪಿಜಿ ಸಬ್ಸಿಡಿ ಪಡೆಯಲು ಆಧಾರ್ ಕಡ್ಡಾಯ ಮಾಡಿದ ಬೆನ್ನಲ್ಲೇ ಇದೀಗ ನ್ಯಾಯಬೆಲೆ ಅಂಗಡಿಯಿಂದ ಪಡಿತರ ಪಡೆಯುವುದಕ್ಕೂ ಕೂಡ ಕೇಂದ್ರ ಸರ್ಕಾರ ಆಧಾರ್ ನ್ನು ಕಡ್ಡಾಯ ಮಾಡಿದೆ...

ಜೂ.30ರ ಬಳಿಕ ಪಡಿತರ ಪಡೆಯಲು ಆಧಾರ್ ಕಡ್ಡಾಯ: ಕೇಂದ್ರ ಸರ್ಕಾರ
ಆಧಾರ್ ಕಾರ್ಡ್ (ಸಂಗ್ರಹ ಚಿತ್ರ)
Published On :

ನವದೆಹಲಿ: ಎಲ್'ಪಿಜಿ ಸಬ್ಸಿಡಿ ಪಡೆಯಲು ಆಧಾರ್ ಕಡ್ಡಾಯ ಮಾಡಿದ ಬೆನ್ನಲ್ಲೇ ಇದೀಗ ನ್ಯಾಯಬೆಲೆ ಅಂಗಡಿಯಿಂದ ಪಡಿತರ ಪಡೆಯುವುದಕ್ಕೂ ಕೂಡ ಕೇಂದ್ರ ಸರ್ಕಾರ ಆಧಾರ್ ನ್ನು ಕಡ್ಡಾಯ ಮಾಡಿದೆ.

ಆಹಾರ ಭದ್ರತಾ ಕಾಯ್ದೆಯ ಅಡಿಯಲ್ಲಿ ಪಡಿತರ ವಿತರಣೆಗೆ ರೂ. 1.4 ಲಕ್ಷ ಕೋಟಿ ಸಬ್ಸಿಡಿಯನ್ನು ನೀಡಲಾಗುತ್ತಿದ್ದು, ಇದು ಪೋಲಾಗುವುದನ್ನು ತಪ್ಪಿಸುವ ಸಲುವಾಗಿ ಕೇಂದ್ರ ಕ್ರಮವನ್ನು ಕೈಗೊಂಡಿದೆ. ಇದರಂತೆ ಪಡಿತರ ಕಾರ್ಡ್ ಗೂ ಆಧಾರ್ ಸಂಯೋಜಿಸಲು ನಿರ್ಧಾರ ಕೈಗೊಂಡಿದೆ.

ಈ ಸಂಬಂಧ ನಿನ್ನೆಯಷ್ಟೇ ಅಧಿಸೂಚನೆಯೊಂದನ್ನು ಹೊರಡಿಸಿರುವ ಕೇಂದ್ರ ಸರ್ಕಾರ, ಜೂ.30 ರ ಬಳಿಕ ಆಧಾರ್ ಸಂಯೋಜನೆ ಇಲ್ಲದೆಯೇ ಪಡಿತರದಾರರಿಗೆ ಸಬ್ಸಿಡಿಗೆ ಒಳಪಟ್ಟ ಪಡಿತರ ಧಾನ್ಯಗಳನ್ನು ನ್ಯಾಯಬೆಲೆ ಅಂಗಡಿಗಳಲ್ಲಿ ಮಾರಾಟ ಮಾಡುವಂತಿಲ್ಲ ಎಂದು ಸೂಚನೆ ನೀಡಿದೆ. ಹೀಗಾಗಿ ಜೂನ್ 30 ಒಳಗಾಗಿ ಪಡಿತರ ಕಾರ್ಡ್ ಗಳ ಜೊತೆಗೆ ಆಧಾರ್ ಜತೆ ಸಂಯೋಜನೆ ಮಾಡಿಸುವುದು ಕಡ್ಡಾಯವಾಗಿದೆ.

ರೇಷನ್ ಕಾರ್ಡ್ ಗಳನ್ನು ಆಧಾರ್ ಜತೆ ಸಂಯೋಜಿಸಲು ಹಲವು ಗಡುವುಗಳನ್ನು ನೀಡಿದ್ದರೂ, ಈ ಪ್ರಕ್ರಿಯೆ ಈಗಲೂ ನಿಧಾನಗತಿಯಲ್ಲಿ ನಡೆಯುತ್ತಿದೆ. ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿನ ಸೇರಿಕೆ ಮತ್ತು ಭ್ರಷ್ಟಾಚಾರವನ್ನು ತಡೆಗಟ್ಟುವ ನಿಟ್ಟಿನಿಂದ ಈ ಕ್ರಮ ಅನಿವಾರ್ಯವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಅಸ್ಸಾಂ, ಮೇಘಾಲಯ, ಜಮ್ಮು ಮತ್ತು ಕಾಶ್ಮೀರ ರಾಜ್ಚಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಪಡಿತರ ಆಹಾರ ಧಾನ್ಯಗಳನ್ನು ಪಡೆಯಲು ಆಧಾರ್ ಕಾರ್ಡ್ ಕಡ್ಡಾಗೊಳಿಸಲಾಗುತ್ತಿದೆ. ಈ ಅಧಿಸೂಚನೆ ಫೆ.8 ರಿಂದಲೇ ಜಾರಿಗೆ ಬರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ವರ್ಷ ನವೆಂಬರ್ ತಿಂಗಳಿನಲ್ಲಿ ದೇಶದಾದ್ಯಂತ ಆಹಾರ ಭದ್ರತಾ ಕಾಯ್ದೆಯನ್ನು ಜಾರಿಗೆ ತರಲಾಗಿತ್ತು. ಕಾಯ್ದೆಯ ಅಡಿಯಲ್ಲಿ 80ಕೋಟಿಗೂ ಹೆಚ್ಚು ಜನರಿಗೆ ಸಹಾಯ ಧನದಲ್ಲಿ ಆಹಾರ ಧಾನ್ಯವನ್ನು ಪೂರೈಕೆ ಮಾಡಲಾಗುತ್ತಿದೆ. ಇದೀಗ ಕೇಂದ್ರ ಹೊಸ ಅಧಿಸೂಚನೆ ಹೊರಡಿಸಿರುವ ಹಿನ್ನಲೆಯಲ್ಲಿ ಈ ವರೆಗೂ ಆಧಾರ್ ನೋಂದಣೆ ಮಾಡಿಸಿಕೊಳ್ಳದೇ ಇರುವವರು ಜೂ.30ರ ಒಳಗಾಗಿ ಜೋಡಣೆ ಮಾಡಿಕೊಳ್ಳಬೇಕಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.