ಕೇರಳದಲ್ಲಿ ಡಿವೈಎಫ್ಐ ಕಾರ್ಯಕರ್ತನ ಬರ್ಬರ ಹತ್ಯೆ
ಕೇರಳದ ಹರಿಪಡ್ ಸಮೀಪದ ಕರುವಟ್ಟದಲ್ಲಿ ಡಿವೈಎಫ್ಐ ಕಾರ್ಯಕರ್ತರೊಬ್ಬರನ್ನು ಶುಕ್ರವಾರ ಬರ್ಬರವಾಗಿ...

Published On :
ಆಲಪುಳ: ಕೇರಳದ ಹರಿಪಡ್ ಸಮೀಪದ ಕರುವಟ್ಟದಲ್ಲಿ ಡಿವೈಎಫ್ಐ ಕಾರ್ಯಕರ್ತರೊಬ್ಬರನ್ನು ಶುಕ್ರವಾರ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಹತ್ಯೆಯಾದ ಡಿವೈಎಫ್ಐ ಕಾರ್ಯಕರ್ತ 22 ವರ್ಷದ ಜಿಶ್ನು ಎಂದು ಗುರುತಿಸಲಾಗಿದ್ದು, ಇಂದು ಮಧ್ಯಾಹ್ನ 12.30ರ ಸುಮಾರಿಗೆ 10 ಜನರ ತಂಡವೊಂದು ದ್ವಿಚಕ್ರ ವಾಹನದಲ್ಲಿ ಅವರ ಮನೆಗೆ ನುಗ್ಗಿ ಹತ್ಯೆ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಶ್ನು ಡಿವೈಎಫ್ಐ ಹರಿಪಡ್ ಪ್ರದೇಶ ಸಮಿತಿಯ ಜಂಟಿ ಕಾರ್ಯದರ್ಶಿಯಾಗಿದ್ದು, ಕ್ರಿಮಿನಲ್ ಗ್ಯಾಂಗ್ ವೊಂದು ಹಣಕ್ಕಾಗಿ ಅವರನ್ನು ಹತ್ಯೆ ಮಾಡಿದೆ ಎಂದು ಸ್ಥಳೀಯ ಸಿಪಿಎಂ ನಾಯಕರು ಹೇಳಿದ್ದಾರೆ.
ಸಿಪಿಎಂ ನಾಯಕರ ಪ್ರಕಾರ, ಜಿಶ್ನು ಹಾಗೂ ಇತರೆ ಡಿವೈಎಫ್ಐ ಕಾರ್ಯಕರ್ತರು ಆ ಗ್ಯಾಂಗ್ ವಿರುದ್ಧ ಪ್ರತಿಭಟನೆ ಮಾಡಿದ್ದರು. ಈ ದ್ವೇಷವೇ ಕೊಲೆಗೆ ಕಾರಣ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


