ಹೆಚ್-1 ಬಿ ವೀಸಾ ವಿಷಯವಾಗಿ ಅಮೆರಿಕದೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ: ಕೇಂದ್ರ ಸರ್ಕಾರ
ಭಾರತೀಯ ಐಟಿ ಕ್ಷೇತ್ರದ ಮೇಲೆ ಪ್ರತಿಕೂಲ ಪರಿಣಾಮ ಬೀರಲಿರುವ ಹೆಚ್-1 ಬಿ ವೀಸಾ ಹೊಸ ನೀತಿಗಳ ಬಗ್ಗೆ ಅಮೆರಿಕ ಸರ್ಕಾರದೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

Published On :
ನವದೆಹಲಿ: ಭಾರತೀಯ ಐಟಿ ಕ್ಷೇತ್ರದ ಮೇಲೆ ಪ್ರತಿಕೂಲ ಪರಿಣಾಮ ಬೀರಲಿರುವ ಹೆಚ್-1 ಬಿ ವೀಸಾ ಹೊಸ ನೀತಿಗಳ ಬಗ್ಗೆ ಅಮೆರಿಕ ಸರ್ಕಾರದೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಡೊನಾಲ್ಡ್ ಟ್ರಂಪ್ ಆಡಳಿತ ಹೆಚ್-1 ಬಿ ವೀಸಾ ನೀತಿಗಳಲ್ಲಿ ಬದಲಾವಣೆ ಎಂದಿರುವುದು ಭಾರತೀಯ ಐಟಿ ಕ್ಷೇತ್ರದ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ. ಈ ಆತಂಕದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅಮೆರಿಕಾ ಸರ್ಕಾರ ಹಾಗೂ ಕಾಂಗ್ರೆಸ್ ನ ಸದಸ್ಯರೊಂದಿಗೆ ಮಾತುಕತೆ ನಡೆಸುತ್ತಿದೆ.
ಹೆಚ್-1 ಬಿ ವೀಸಾ ಮಾತ್ರವಲ್ಲದೇ ಭಾರತದ ಮೇಲೆ ಪರಿಣಾಮ ಬೀರಲಿರುವ ಡೊನಾಲ್ಡ್ ಟ್ರಂಪ್ ಆಡಳಿತ ಹೊರಡಿಸಿರುವ ಹಲವು ಆದೇಶಗಳ ಬಗ್ಗೆಯೂ ಚರ್ಚೆ ನಡೆಸುತ್ತಿರುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ಡೊನಾಲ್ಡ್ ಟ್ರಂಪ್ ಆಡಳಿತ ಹೊರಡಿಸುತ್ತಿರುವ ಆದೇಶದಿಂದ ಮುಂದಿನ ಪರಿಣಾಮಗಳ ಬಗ್ಗೆ ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಎಂದು ವಿದೇಶಾಂಗ ಇಲಾಖೆ ವಕ್ತಾರ ವಿಕಾಸ್ ಸ್ವರೂಪ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


