ಮಧ್ಯಪ್ರದೇಶ ಎಟಿಎಸ್ ನಿಂದ ಪಾಕಿಸ್ತಾನದ ಬೇಹುಗಾರಿಕ ಜಾಲ ಪತ್ತೆ: 11 ಬಂಧನ
ಮಧ್ಯಪ್ರದೇಶದ ಭಯೋತ್ಪಾದನಾ ನಿಗ್ರಹ ದಳ ಪಾಕಿಸ್ತಾನದ ಪರ ಭಾರತದಲ್ಲಿ ಬೇಹುಗಾರಿಗೆ ನಡೆಸುತ್ತಿದ್ದ ಜಾಲವನ್ನು ಪತ್ತೆ ಮಾಡಿದ್ದು 11 ಜನರನ್ನು ಬಂಧಿಸಿದೆ.

Published On :
ಭೋಪಾಲ್: ಮಧ್ಯಪ್ರದೇಶದ ಭಯೋತ್ಪಾದನಾ ನಿಗ್ರಹ ದಳ ಪಾಕಿಸ್ತಾನದ ಪರ ಭಾರತದಲ್ಲಿ ಬೇಹುಗಾರಿಗೆ ನಡೆಸುತ್ತಿದ್ದ ಜಾಲವನ್ನು ಪತ್ತೆ ಮಾಡಿದ್ದು 11 ಜನರನ್ನು ಬಂಧಿಸಿದೆ. ಬಂಧಿತರಿಂದ ಚೀನಾದ ಉಪಕರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಭಾರತೀಯ ಸೇನಾ ಕಾರ್ಯಾಚರಣೆಗಳ ಬಗ್ಗೆ ಬೇಹುಗಾರಿಕೆ ನಡೆಸಲು ನಿಯೋಜಿಸಲಾಗಿದ್ದ ತಂಡ ಚೀನಾ ಉಪಕರಣಗಳು ಹಾಗೂ ಸಿಮ್ ಕಾರ್ಡ್ ಗಳ ಸಹಾಯದಿಂದ ಬೇಹುಗಾರಿಕೆ ನಡೆಸುತ್ತಿದ್ದರು ಎಂದು ಎಟಿಎಸ್ ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯದ ವಿವಿಧ ಭಾಗಗಳಲ್ಲಿ ಬೇಹುಗಾರಿಕಾ ಜಾಲದಲ್ಲಿ ಸಕ್ರಿಯರಾಗಿದ್ದ ಪಾಕಿಸ್ತಾನ ಗುಪ್ತಚರ ಇಲಾಖೆ ಐಎಸ್ಐ ಬೆಂಬಲಿತ 11 ಜನರನ್ನು ಬಂಧಿಸಲಾಗಿದೆ. ಬಂಧಿತರು ಚೀನಾದ್ ಉಪಕರಣ ಹಾಗೂ ಸಿಮ್-ಬಾಕ್ಸ್ ಗಳನ್ನು ಬಳಸಿಕೊಂಡು ಪರ್ಯಾಯ ದೂರವಾಣಿ ಎಕ್ಸ್ ಚೇಂಜ್ ಗಳ ಮೂಲಕ ಕಾರ್ಯನಿರ್ವಹಿಸುತ್ತಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದು, ಸಿಮ್ ಬಾಕ್ಸ್, ಮೊಬೈಲ್ ಫೋನ್, ಲ್ಯಾಪ್ ಟಾಪ್, ಡಾಟಾ ಕಾರ್ಡ್, ಪ್ರೀಪೇಯ್ಡ್ ಸಿಮ್ ಕಾರ್ಡ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಮೂವರನ್ನು ಭೋಪಾಲ್ ನಲ್ಲಿ ಬಂಧಿಸಲಾಗಿದ್ದು, ಸತ್ನಾದಲ್ಲಿ ಓರ್ವನನ್ನು, ಜಬಲ್ ಪುರದಲ್ಲಿ ಇಬ್ಬರು ಹಾಗೂ ಐವರನ್ನು ಗ್ವಾಲಿಯರ್ ನಲ್ಲಿ ಬಂಧಿಸಲಾಗಿದ್ದು, ಬಂಧಿತರ ವಿರುದ್ಧ ಐಪಿಎಸಿ ಸೆಕ್ಷನ್ 122 ಹಾಗೂ 123 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


