ನ್ಯಾಶನಲ್ ಹೆರಾಲ್ಡ್ ಕೇಸು: ಮಾರ್ಚ್ 25ಕ್ಕೆ ವಿಚಾರಣೆ ಮುಂದೂಡಿದ ದೆಹಲಿ ಹೈಕೋರ್ಟ್
ನ್ಯಾಶನಲ್ ಹೆರಾಲ್ಡ್ ಕೇಸು ಕುರಿತ ಅರ್ಜಿ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಮಾರ್ಚ್ 25ಕ್ಕೆ...

Published On :
ನವದೆಹಲಿ: ನ್ಯಾಶನಲ್ ಹೆರಾಲ್ಡ್ ಕೇಸು ಕುರಿತ ಅರ್ಜಿ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಮಾರ್ಚ್ 25ಕ್ಕೆ ಮುಂದೂಡಿದೆ.
ಆರೋಪಿಗಳ ವಿರುದ್ಧ ಸಾಕ್ಷ್ಯಾಧಾರಗಳನ್ನು ಮತ್ತು ಇತರ ದಾಖಲೆಗಳ ಪಟ್ಟಿಯನ್ನು ಬಿಜೆಪಿ ನಾಯಕ ಸುಬ್ರಹ್ಮಣ್ಯ ಸ್ವಾಮಿ ಪರ ವಕೀಲರು ಇಂದು ನ್ಯಾಯಾಲಯಕ್ಕೆ ಸಲ್ಲಿಸಿದರು.
ಇದಕ್ಕೂ ಮುನ್ನ ಸ್ವಾಮಿಯವರ ಮನವಿಯನ್ನು ವಜಾಗೊಳಿಸಿದ ಕೋರ್ಟ್, ನ್ಯಾಶನಲ್ ಹೆರಾಲ್ಡ್ ಕೇಸಿಗೆ ಸಂಬಂಧಪಟ್ಟಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತು ಇತರ ಆರೋಪಿಗಳ ಕುರಿತು ದಾಖಲೆಗಳನ್ನು ಕೇಳಿದ್ದರು.
2012ರಲ್ಲಿ ದೂರು ದಾಖಲಿಸಿದ್ದ ಸುಬ್ರಹ್ಮಣ್ಯ ಸ್ವಾಮಿ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಕೆಲವು ಕಾಂಗ್ರೆಸ್ ನಾಯಕರು ಭೂ ಒಪ್ಪಂದದಲ್ಲಿ ಮೋಸ ಮಾಡಿದ್ದಾರೆ ಎಂದು ಆರೋಪಿಸಿದ್ದರು.
ಸ್ವಾಮಿಯವರು ತಮ್ಮ ದೂರಿನಲ್ಲಿ, ನ್ಯಾಶನಲ್ ಹೆರಾಲ್ಡ್ ಪತ್ರಿಕೆಯ ಮಾಲೀಕತ್ವ ಅಸೋಸಿಯೇಟೆಡ್ ಜರ್ನಲ್ಸ್ ಪ್ರೈ.ಲಿಮಿಟೆಡ್ ಗೆ ಬಡ್ಡಿರಹಿತ 90.25 ಕೋಟಿ ರೂಪಾಯಿ ಸಾಲವನ್ನು ಕಾಂಗ್ರೆಸ್ ಸರ್ಕಾರ ನೀಡಿತ್ತು ಎಂದು ಗಂಭೀರ ಆರೋಪ ಮಾಡಿದ್ದರು. ಅದು ಆದಾಯ ತೆರಿಗೆ ಕಾಯ್ದೆ 1961ರ ಸೆಕ್ಷನ್ 269ಟಿಯಡಿ ಉಲ್ಲಂಘನೆಯಾಗಿದೆ ಎಂದು ದೂರಿದ್ದಾರೆ. ಕಳೆದ ಆಗಸ್ಟ್ ನಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಇತರರಿಗೆ ನ್ಯಾಯಾಲಯ ನೊಟೀಸ್ ಜಾರಿ ಮಾಡಿ ಪ್ರಮುಖ ದಾಖಲೆಗಳನ್ನು ನೀಡುವಂತೆ ಹೇಳಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Sonia Gandhiಸೋನಿಯಾ ಗಾಂಧಿRahul Gandhiರಾಹುಲ್ ಗಾಂಧಿಸುಬ್ರಹ್ಮಣ್ಯನ್ ಸ್ವಾಮಿNational Herald caseSubrahmanyan Swamyನ್ಯಾಶನಲ್ ಹೆರಾಲ್ಡ್ ಕೇಸು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


