ಕಾಂಗ್ರೆಸ್-ಎಸ್ ಪಿ ಮೈತ್ರಿಯ ಬಗ್ಗೆ ರಾಜನಾಥ್ ಸಿಂಗ್ ವ್ಯಂಗ್ಯ
ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಹಾಗೂ ಕಾಂಗ್ರೆಸ್ ನ ಮೈತ್ರಿಯ ಬಗ್ಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ವ್ಯಂಗ್ಯವಾಡಿದ್ದು, ಮೈನಸ್ ಗೆ ಮೈನಸ್ ನ್ನು ಕೂಡಿದರೆ ಫಲಿತಾಂಶವೂ ಮೈನಸ್ ಎಂದಿದ್ದಾರೆ.

Published On :
ನೋಯ್ಡಾ: ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಹಾಗೂ ಕಾಂಗ್ರೆಸ್ ನ ಮೈತ್ರಿಯ ಬಗ್ಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ವ್ಯಂಗ್ಯವಾಡಿದ್ದು, ಮೈನಸ್ ಗೆ ಮೈನಸ್ ನ್ನು ಕೂಡಿದರೆ ಫಲಿತಾಂಶವೂ ಮೈನಸ್ ಎಂದಿದ್ದಾರೆ.
ನೋಯ್ಡಾದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ರಾಜನಾಥ್ ಸಿಂಗ್, ಎಸ್ ಪಿ-ಕಾಂಗ್ರೆಸ್ ಮೈತ್ರಿಯನ್ನು ಮೈನಸ್+ಮೈನಸ್= ಮೈನಸ್ ಸಮೀಕರಣಕ್ಕೆ ಹೋಲಿಸಿದ್ದು, ಬಿಎಸ್ ಪಿ ತಾನು ಈಗಾಗಲೇ ಸೋಲೊಪ್ಪಿಕೊಂಡಿರುವ ಯುದ್ಧದಲ್ಲಿ ಸೆಣೆಸುತ್ತಿದೆ ಎಂದಿದ್ದಾರೆ. ಜಾಟ್ ಸಮುದಾಯದವರು ಬಿಜೆಪಿಗೆ ಬೆಮ್ಬಲ ನೀಡಲಿದ್ದಾರೆ, ನಾನು ಜಾಟ್ ಸಮುದಾಯದವರಿರುವ ಪ್ರದೇಶದಲ್ಲಿ ಹೆಚ್ಚು ಪ್ರವಾಸ ಮಾಡಿದ್ದೇನೆ, ಅಲ್ಲಿನ ಜನತೆ ಬಿಜೆಪಿಗೆ ಅಭೂತಪೂರ್ವ ಬೆಂಬಲ ನೀಡುತ್ತಿದ್ದಾರೆ ಎಂದು ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ವೇದಿಕೆ ಸಿದ್ಧಗೊಂಡಿದ್ದು ಫೆ.11 ರಂದು ಮೊದಲ ಹಂತದ ಮತದಾನ ಪ್ರಾರಂಭವಾಗಲಿದ್ದು 73 ವಿಧಾನಸಭಾ ಕ್ಷೇತ್ರಗಳಿಗೆ ಬೆಳಿಗ್ಗೆ 7 ರಿಂದ ಮತದಾನ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ರಾಜನಾಥ್ ಸಿಂಗ್ಚುನಾವಣೆUttar pradeshಉತ್ತರ ಪ್ರದೇಶRajnath Singhಕಾಂಗ್ರೆಸ್-ಎಸ್ ಪಿ ಮೈತ್ರಿAssembly Elections 2017Congress-SP
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


