ಉತ್ತರ ಪ್ರದೇಶ ಚುನಾವಣೆ: ಮಧ್ಯಾಹ್ನ 2 ಗಂಟೆಯವರೆಗೆ ಶೇ.45 ರಷ್ಟು ಮತದಾನ
ಒಟ್ಟು ಏಳು ಹಂತದ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಶನಿವಾರ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಮಧ್ಯಾಹ್ನ ಎರಡು..

Published On :
ಲಖನೌ: ಒಟ್ಟು ಏಳು ಹಂತದ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಶನಿವಾರ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಮಧ್ಯಾಹ್ನ ಎರಡು ಗಂಟೆಯವರೆಗೆ ಶೇ,45ರಷ್ಟು ಮತದಾನವಾಗಿದೆ
ಕೆಲವು ಸಣ್ಣಪುಟ್ಟ ಅಹಿತಕರ ಘಟನೆಗಳನ್ನು ಹೊರತುಪಡಿಸಿದ ಮತದಾನ ಇಂದು ಬೆಳಗ್ಗೆಯಿಂದ ಶಾಂತಿಯುತವಾಗಿ ನಡೆಯುತ್ತಿದ್ದು, ಮೊದಲ ಹಂತದಲ್ಲಿ ಒಟ್ಟು 2.60 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.
ಒಟ್ಟು 73 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆ 9 ಗಂಟೆಯಿಂದ ಮತದಾನ ನಡೆಯುತ್ತಿದ್ದು, ಬಿಜೆಪಿ, ಬಿಎಸ್ಪಿ, ಕಾಂಗ್ರೆಸ್ ಮೈತ್ರಿ ಮತ್ತು ರಾಷ್ಟ್ರೀಯ ಲೋಕದಳ ಪಕ್ಷಗಳ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನೋಯ್ಡಾ ಕ್ಷೇತ್ರದಿಂದ ಕೇಂದ್ರ ಸಚಿವ ರಾಜನಾಥ್ ಸಿಂಗ್ ಪುತ್ರ ಪಂಕಜ್ ಸಿಂಗ್, ಮಥುರಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮುಖಂಡ ಪ್ರದೀಪ್ ಮಾಥೂರ್, ತಾನಾಭವನ್‌ನಿಂದ ಬಿಜೆಪಿಯ ವಿವಾದಿತ ಶಾಸಕ ಸುರೇಶ್ ರಾಣಾ ಮುಖ್ಯವಾಗಿ ಕಣದಲ್ಲಿದ್ದಾರೆ.
ಮತದಾನದ ಪ್ರಮುಖಾಂಶಗಳು
ಮೀರತ್ ನಲ್ಲಿ ಬಿಜೆಪಿ ಶಾಸಕ ಸರ್ಧಾನ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಸಂಗೀತ್ ಸೋಮ್ ಮತದಾನ
ಮಥುರಾದಲ್ಲಿ 115 ವಯಸ್ಸಿನ ವೃದ್ಧೆಯಿಂದ ಮತದಾನ
ಏಳು ಹಂತಗಳ ಮತದಾನದ ಪೈಕಿ ಮೊದಲನೇ ಹಂತದಲ್ಲಿ ಸುಮಾರು 73 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದ್ದು, 15 ಜಿಲ್ಲೆಗಳ ಒಟ್ಟು 2.6 ಕೋಟಿ ಜನರು ತಮ್ಮ ಹಕ್ಕನ್ನು ಚಲಾಯಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


