ದೇಶ

ಉ. ಪ್ರದೇಶ ಚುನಾವಣೆ; ಮೊದಲೆರಡು ಹಂತಗಳಲ್ಲಿ ಬಿಜೆಪಿಗೆ 90ಕ್ಕೂ ಹೆಚ್ಚು ಸ್ಥಾನ: ಅಮಿತ್ ಶಾ

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ಮೊದಲೆರಡು ಹಂತಗಳಲ್ಲಿ ಬಿಜೆಪಿ 90ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ...

ಉ. ಪ್ರದೇಶ ಚುನಾವಣೆ; ಮೊದಲೆರಡು ಹಂತಗಳಲ್ಲಿ ಬಿಜೆಪಿಗೆ 90ಕ್ಕೂ ಹೆಚ್ಚು ಸ್ಥಾನ: ಅಮಿತ್ ಶಾ
ಅಮಿತ್ ಶಾ
Published On :
ಲಖನೌ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ಮೊದಲೆರಡು ಹಂತಗಳಲ್ಲಿ ಬಿಜೆಪಿ 90ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಭಾನುವಾರ ಹೇಳಿದ್ದಾರೆ.
ಮೊದಲ ಹಂತದ ಮತದಾನದ ನಂತರ ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಮೊದಲ ಹಂತದಲ್ಲಿ ಬಿಜೆಪಿ 50ಕ್ಕೂ ಹೆಚ್ಚು ಸ್ಥಾನಗಳಲ್ಲಿ ಹಾಗೂ ಎರಡನೇ ಹಂತದಲ್ಲಿ 40ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಿನ್ನೆಯಷ್ಟೇ ಉತ್ತರ ಪ್ರದೇಶದಲ್ಲಿ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು, ಶೇ.64ರಷ್ಟು ಮತದಾನವಾಗಿದೆ. 2012ರ ಚುನಾವಣೆಯಲ್ಲಿ ಶೇ.59ರಷ್ಟು ಮತದಾನ ನಡೆದಿತ್ತು. ಈ ಬಾರಿ ಶೇ.5ರಷ್ಟು ಹೆಚ್ಚಳ ಕಂಡಿದೆ. 73 ವಿಧಾನಸಭಾ ಕ್ಷೇತ್ರಗಳಲ್ಲಿ ಬಹುತೇಕ ಶಾಂತಿಯುತ ಮತದಾನವಾಗಿದೆ. ಇನ್ನೂ 6 ಹಂತಗಳ ಮತದಾನ ನಡೆಯಬೇಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.