ಉತ್ತರಾಖಂಡ್ ನಲ್ಲಿ ರಾಹುಲ್ ಗಾಂಧಿ ಸಮಾವೇಶ
ಉತ್ತರಾಖಂಡ್ ವಿಧಾನಸಭಾ ಚುನಾವಣೆಗೆ ಸಿದ್ಧಗೊಳ್ಳುತ್ತಿದ್ದು, ರಾಹುಲ್ ಗಾಂಧಿ ಫೆ.12 ರಂದು ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.

Published On :
ಹರಿದ್ವಾರ್: ಉತ್ತರಾಖಂಡ್ ವಿಧಾನಸಭಾ ಚುನಾವಣೆಗೆ ಸಿದ್ಧಗೊಳ್ಳುತ್ತಿದ್ದು, ರಾಹುಲ್ ಗಾಂಧಿ ಫೆ.12 ರಂದು ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.
ನುಕ್ಕಡ್ ಸಭಾದೊಂದಿಗೆ ರಾಹುಲ್ ಗಾಂಧಿ ರ್ಯಾಲಿ ನಡೆಸಲಿದ್ದಾರೆ. ಇದಕ್ಕೂ ಮುನ್ನ ಉತ್ತರ ಪ್ರದೇಶದಲ್ಲಿ ಮಾತನಾಡಿದ್ದ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಚುನಾವಣೆಗೂ ಮುನ್ನ ಕಪ್ಪುಹಣ ವಾಪಸ್ ತರುವುದಾಗಿ ಹೇಳಿದ್ದ ಪ್ರಧಾನಿ ನರೇಂದ್ರ ಮೋದಿ ಈ ವರೆಗೂ ಸ್ವಿಸ್ ಬ್ಯಾಂಕ್ ನಿಂದ ಕಪ್ಪುಹಣ ವಾಪಸ್ ತರುವುದರ ಬಗ್ಗೆ ಯಾವುದೇ ಕ್ರಮ ಘೋಷಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.
ಸ್ವಿಸ್ ಬ್ಯಾಂಕ್ ನಲ್ಲಿ ಅಕ್ರಮ ಹಣ ಇಟ್ಟಿರುವವರ ಹೆಸರುಗಳನ್ನು ಲೋಕಸಭೆ, ರಾಜ್ಯಸಭೆಯಲ್ಲಿ ಏಕೆ ಬಹಿರಂಗಗೊಳಿಸುತ್ತಿಲ್ಲ ಎಂದು ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಿದ್ದರು. ಉತ್ತರ ಪ್ರದೇಶದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ನಂತರ ಫೆ.12 ರಂದು ಉತ್ತರಾಖಂಡ್ ನಲ್ಲಿ ನಡೆಯಲಿರುವ ರಾಹುಲ್ ಗಾಂಧಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಫೆ.15 ರಂದು ಉತ್ತರಾಖಂಡ್ ನಲ್ಲಿ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Rahul Gandhiರಾಹುಲ್ ಗಾಂಧಿUttarakhandಉತ್ತರಾಖಂಡ್Haridwarವಿಧಾನಸಭಾ ಚುನಾವಣೆ-2017assembly elections-2017ಹರಿದ್ವಾರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


