ದೇಶ

ಪ್ರತ್ಯೇಕತಾವಾದಿಗಳಿಂದ ಪ್ರತಿಭಟನೆಗೆ ಕರೆ: ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿಗಳ ನಿಯೋಜನೆ

ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿಗಳು ಮತ್ತೆ ಪ್ರತಿಭಟನೆಗೆ ಕರೆ ನೀಡಿದ್ದು, ಕಣಿವೆಯಲ್ಲಿ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರತ್ಯೇಕತಾವಾದಿಗಳಿಂದ ಪ್ರತಿಭಟನೆಗೆ ಕರೆ: ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿಗಳ ನಿಯೋಜನೆ
ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿಗಳ ನಿಯೋಜನೆ
Published On :
ಶ್ರೀನಗರ: ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿಗಳು ಮತ್ತೆ ಪ್ರತಿಭಟನೆಗೆ ಕರೆ ನೀಡಿದ್ದು, ಕಣಿವೆಯಲ್ಲಿ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 
ಕಣಿವೆಯಲ್ಲಿ ಎಲ್ಲಿಯೂ ಕರ್ಫ್ಯೂ ಜಾರಿಯಲ್ಲಿರುವುದಿಲ್ಲ ಎಂದು ಕಾಶ್ಮೀರ ಐಜಿಪಿ ಎಸ್ ಜೆಎಂ ಗಿಲಾನಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಭಾನುವಾರ ಸೇನಾ ಪಡೆ ಕುಲ್ಗಾಂ ಜಿಲ್ಲೆಯಲ್ಲಿ 4 ಉಗ್ರರನ್ನು ಹೊಡೆದುರುಳಿಸಿತ್ತು, ಉಗ್ರವಿರೋಧಿ ಕಾರ್ಯಾಚರಣೆಯಲ್ಲಿ 4 ಉಗ್ರರು ಇಬ್ಬರು ನಾಗರಿಕರು, ಇಬ್ಬರು ಯೋಧರು ಸೇರಿದಂತೆ ಒಟ್ಟು 8 ಜನರು ಹತ್ಯೆಯಾಗಿದ್ದರು. 
ಕಾರ್ಯಾಚರಣೆ ವೇಳೆ 20 ಕ್ಕೂ ಹೆಚ್ಚು ಜನರಿಗೆ ಗಾಯಗಳುಂಟಾಗಿದ್ದು, ಹತ್ಯೆಯಾದ ಉಗ್ರರ ಪೈಕಿ ಇಬ್ಬರು ಉಗ್ರರು ಲಷ್ಕರ್-ಎ-ತೊಯ್ಬಾ ಹಾಗೂ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಉಗ್ರರು ಸೇರಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪ್ರತ್ಯೇಕತಾವಾದಿಗಳು ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಅಂಗಡಿಗಳು, ಸಾರಿಗೆ ಹಾಗೂ ವ್ಯಾಪಾರ ವಹಿವಾಟುಗಳು ಸ್ಥಗಿತಗೊಂಡಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.