ಎಲ್ಲವನ್ನೂ ಕ್ಷಮಿಸಿದ್ದೇವೆ, ಉತ್ತಮ ಆಡಳಿತಕ್ಕಾಗಿ ಕೈ ಜೋಡಿಸಿ: ಶಶಿಕಲಾ ಬಣಕ್ಕೆ ಪನ್ನೀರ್ ಸೆಲ್ವಂ ಆಹ್ವಾನ
ನಿಮ್ಮ ಎಲ್ಲ ತಪ್ಪುಗಳನ್ನು ಕ್ಷಮಿಸಿದ್ದೇವೆ.. ಉತ್ತಮ ಆಡಳಿತಕ್ಕಾಗಿ ನಮ್ಮೊಂದಿಗೆ ಕೈ ಜೋಡಿಸಿ ಎಂದು ಹಂಗಾಮಿ ಸಿಎಂ ಪನ್ನೀರ್ ಸೆಲ್ವಂ ಶಶಿಕಲಾ ಬಣದ ಶಾಸಕರಿಗೆ ಬಹಿರಂಗ ಆಹ್ವಾನ ನೀಡಿದ್ದಾರೆ.

ಚೆನ್ನೈ: ಜಯಲಲಿತಾ ಆತ್ಮ ನಮಗೆ ಮಾರ್ಗದರ್ಶನ ನೀಡುತ್ತದೆ.. ಅದರಂತೆ ರಾಜ್ಯದಲ್ಲಿ ಆಡಳಿತ ಮುಂದುವರಿಸುತ್ತೇನೆ..ನಿಮ್ಮ ಎಲ್ಲ ತಪ್ಪುಗಳನ್ನು ಕ್ಷಮಿಸಿದ್ದೇವೆ.. ಉತ್ತಮ ಆಡಳಿತಕ್ಕಾಗಿ ನಮ್ಮೊಂದಿಗೆ ಕೈ ಜೋಡಿಸಿ ಎಂದು ಹಂಗಾಮಿ ಸಿಎಂ ಪನ್ನೀರ್ ಸೆಲ್ವಂ ಶಶಿಕಲಾ ಬಣದ ಶಾಸಕರಿಗೆ ಬಹಿರಂಗ ಆಹ್ವಾನ ನೀಡಿದ್ದಾರೆ.
ಎಐಎಡಿಎಂಕೆ ಪಕ್ಷದಿಂದ ಹಂಗಾಮಿ ಸಿಎಂ ಪನ್ನೀರ್ ಸೆಲ್ವಂ ಹಾಗೂ ಅವರ ಬೆಂಬಲಿಗ ಸಂಸದ ಮತ್ತು ಶಾಸಕರನ್ನು ಉಚ್ಛಾಟನೆ ಮಾಡಿದ ಬೆನ್ನಲ್ಲೇ ಚೆನ್ನೈನ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪನ್ನೀರ್ ಸೆಲ್ವಂ ಅವರು, ನಿಮ್ಮ ಎಲ್ಲ ತಪ್ಪುಗಳನ್ನು ಕ್ಷಮಿಸಿದ್ದೇವೆ. ತಮಿಳುನಾಡಿನ ಜನತೆಗೆ ಉತ್ತಮ ಆಡಳಿತ ನೀಡುವ ಸಲುವಾಗಿ ನಮ್ಮೊಂದಿಗೆ ಕೈ ಜೋಡಿಸಿ ಎಂದು ಬಹಿರಂಗ ಆಹ್ವಾನ ನೀಡಿದ್ದಾರೆ.
"ಅಮ್ಮನ ಆತ್ಮ ನಮ್ಮನ್ನು ಮತ್ತು ರಾಜ್ಯವನ್ನು ಕಾಪಾಡುತ್ತದೆ. ಮತ್ತೆ ತಮಿಳುನಾಡಲ್ಲಿ ಅಮ್ಮನ ಸುವರ್ಣಯುಗ ಮುಂದುವರಿಯುತ್ತದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿರುತ್ತದೆ. ಶಾಂತಿ ಸುವ್ಯವಸ್ಥೆ ಕಾಪಾಡುತ್ತೇನೆ ಎಂದು ಅವರು ಹೇಳಿದ್ದಾರೆ. ಅಲ್ಲದೆ ಅಮ್ಮನ ಜನಪ್ರಿಯ ಆಡಳಿತದ ಯೋಜನೆಗಳು ಮುಂದುವರಿಯುತ್ತವೆ. ತಮಗೆ ಎಲ್ಲಾ ಶಾಸಕರು ಬೆಂಬಲ ನೀಡುತ್ತಾರೆ ಎಂದು ಹೇಳಿದ ಸೆಲ್ವಂ, ನನಗೆ ಬಹುಮತ ದೊರಕುವುದು ಖಚಿತ ಎಂದು ಭರವಸೆ ವ್ಯಕ್ತ ಪಡಿಸಿದ್ದಾರೆ.
ನಿರೀಕ್ಷೆಗೂ ಮೀರಿ ಬೆಂಬಲ ವ್ಯಕ್ತ ಪಡಿಸಿದ್ದಕ್ಕೆ ಧನ್ಯವಾದ ಹೇಳಿದ ಸೆಲ್ವಂ, ಈಗ ಎಐಡಿಎಂಕೆ ಒಟ್ಟಾಗುವ ಸಮಯ ಬಂದಿದೆ, ಎಲ್ಲರೂ ಒಗ್ಗಟ್ಟಾದರೇ ಮಾತ್ರ ಸಮಸ್ಯೆ ಬಗೆಹರಿಸಲು ಸಾದ್ಯ ಎಂದು ಹೇಳಿದ್ದಾರೆ, ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ಅವರು ಜನತೆಯಲ್ಲಿ ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


