ನ್ಯಾಯಮೂರ್ತಿ ಅಶ್ವಥ್ ನಾರಾಯಣ ಅವರ ಮುಂದೆ ಹಾಜರಾಗಲಿರುವ ವಿಕೆ ಶಶಿಕಲಾ
ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್ ತೀರ್ಪು ಹೊರ ಬೀಳುತ್ತಿದ್ದಂತೆಯೇ ನ್ಯಾಯಮೂರ್ತಿ ಅಶ್ವಥ್ ನಾರಾಯಣ ಅವರನ್ನು ವಿಶೇಷ ನ್ಯಾಯಾಲದ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ.

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್ ತೀರ್ಪು ಹೊರ ಬೀಳುತ್ತಿದ್ದಂತೆಯೇ ನ್ಯಾಯಮೂರ್ತಿ ಅಶ್ವಥ್ ನಾರಾಯಣ ಅವರನ್ನು ವಿಶೇಷ ನ್ಯಾಯಾಲದ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತೀರ್ಪು ಹೊರ ಬಿದ್ದ ಬೆನ್ನಲ್ಲೇ ವಿಶೇಷ ನ್ಯಾಯಾಲಯಕ್ಕೆ ಉಸ್ತುವಾರಿ ಮುಖ್ಯ ನ್ಯಾಯಾಧೀಶರಾಗಿ ನ್ಯಾಯಮೂರ್ತಿ ಅಶ್ವಥ್ ನಾರಾಯಣ ಅವರನ್ನು ನೇಮಕ ಮಾಡಲಾಗಿದೆ. ಹೀಗಾಗಿ ಅಕ್ರಮ ಆಸ್ತಿ ಪ್ರಕರಣದ ಅಪರಾಧಿಯಾಗಿರುವ ಶಶಿಕಲಾ, ನಟರಾಜನ್ ಮತ್ತು ಇಳವರಿಸಿ ಅವರು ನ್ಯಾಯಮೂರ್ತಿ ಅಶ್ವಥ್ ನಾರಾಯಣ ಅವರ ಮುಂದೆ ಹಾಜರಾಗಲಿದ್ದಾರೆ. ಬಳಿಕ ಕರ್ನಾಟಕ ಪೊಲೀಸರು ಮೂವರ ಅಪರಾಧಿಗಳನ್ನು ವಶಕ್ಕೆ ಪಡೆದು ಪರಪ್ಪನ ಅಗ್ರಹಾರಕ್ಕೆ ಕಳುಹಿಸಿಕೊಡಲಿದ್ದಾರೆ.
ಈ ಹಿಂದೆ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾಗಿದ್ದ ನ್ಯಾ. ಮೈಕಲ್ ಕುನ್ಹಾ ಅವರು ಹೈಕೋರ್ಟ್ ನ್ಯಾಯಾಧೀಶರಾಗಿ ನೇಮಕವಾಗಿದ್ದಾರೆ. ಕುನ್ಹಾ ಬಳಿಕ ಅವರ ಸ್ಥಾನಕ್ಕೆ ಈ ವರೆಗೂ ಬೇರಾವುದೇ ನ್ಯಾಯಾಧೀಶರ ನೇಮಕವಾಗಿರಲಿಲ್ಲ. ಇದರ ಬೆನ್ನಲ್ಲೇ ಅಕ್ರಮ ಆಸ್ತಿ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್ ತೀರ್ಪು ನೀಡಿ ಶಶಿಕಲಾ, ನಟರಾಜನ್ ಮತ್ತು ಇಳವರಿಸಿಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಹೀಗಾಗಿ ಶಶಿಕಲಾ, ನಟರಾಜ್ ಮತ್ತು ಇಳವರಿಸಿ ವಿಶೇಷ ಕೋರ್ಟ್ ನ್ಯಾಯಾಧೀಶರ ಮುಂದೆ ಹಾಜರಾಗಬೇಕಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


