ಇಂದು ಸುಪ್ರೀಂಕೋರ್ಟ್ ನಲ್ಲಿ ನಿರ್ಧಾರವಾಗಲಿದೆ ಚಿನ್ನಮ್ಮ ಭವಿಷ್ಯ
ಇಡೀ ದೇಶವೇ ಕಾತರದಿಂದ ನಿರೀಕ್ಷಿಸುತ್ತಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ ಶಶಿಕಲಾ ನಟರಾಜನ ಅವರ ವಿರುದ್ಧದ ಅಕ್ರಮ ಆಸ್ತಿ ಪ್ರಕರಣದ ತೀರ್ಪನ್ನು ಸುಪ್ರೀಂ ಕೋರ್ಟ್ ಇಂದು ಪ್ರಕಟಿಸಲಿದೆ...

ನವದೆಹಲಿ: ಇಡೀ ದೇಶವೇ ಕಾತರದಿಂದ ನಿರೀಕ್ಷಿಸುತ್ತಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ ಶಶಿಕಲಾ ನಟರಾಜನ ಅವರ ವಿರುದ್ಧದ ಅಕ್ರಮ ಆಸ್ತಿ ಪ್ರಕರಣದ ತೀರ್ಪನ್ನು ಸುಪ್ರೀಂ ಕೋರ್ಟ್ ಇಂದು ಪ್ರಕಟಿಸಲಿದೆ. ಇದರೊಂದಿಗೆ ತಮಿಳುನಾಡು ಸಿಎಂ ಆಗಬೇಕೆಂದು ಶತಾಯತಗಾಯ ಪ್ರಯತ್ನಿಸುತ್ತಿರುವ .ಚಿನ್ನಮ್ಮ ಭವಿಷ್ಯ ನಿರ್ಧಾರವಾಗಲಿದೆ.
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಈ ಪ್ರಕರಣದ ಪ್ರಮುಖ ಆರೋಪಿ. ಶಶಿಕಲಾ ಎರಡನೇ ಆರೋಪಿಯಾಗಿದ್ದಾರೆ.
ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಇವರನ್ನು ದೋಷಮುಕ್ತಗೊಳಿಸಿ ಕರ್ನಾಟಕ ಹೈಕೋರ್ಟ್ 2015ರಲ್ಲಿ ಆದೇಶ ನೀಡಿತ್ತು. ಇದನ್ನು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, 2016ರ ಜೂನ್ 7ರಂದು ತೀರ್ಪು ಕಾಯ್ದಿರಿಸಿತ್ತು.
ಜಯಲಲಿತಾ ಸಾವಿನ ನಂತರ, ಎಐಎಡಿಎಂಕೆ ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆಯಾಗಿರುವ ಶಶಿಕಲಾ ಅವರು ತಮಿಳುನಾಡಿನಲ್ಲಿ ಹೊಸ ಸರ್ಕಾರ ರಚಿಸಲು ಅವಕಾಶ ಕೋರಿದ್ದಾರೆ. ಹಾಗಾಗಿ, ಸುಪ್ರೀಂ ಕೋರ್ಟ್ ನೀಡಲಿರುವ ತೀರ್ಪು ಶಶಿಕಲಾ ಪಾಲಿಗೆ ಮಹತ್ವವಾಗಿದೆ.
ನ್ಯಾಯಮೂರ್ತಿಗಳಾದ ಪಿ.ಸಿ. ಘೋಷ್ ಮತ್ತು ಅಮಿತಾವ ರಾಯ್ ಅವರಿರುವ ವಿಭಾಗೀಯ ಪೀಠ ಬೆಳಿಗ್ಗೆ 10.30ಕ್ಕೆ ತೀರ್ಪು ಪ್ರಕಟಿಸಲಿದೆ.
ಇಬ್ಬರು ನ್ಯಾಯಮೂರ್ತಿಗಳು ಪ್ರತ್ಯೇಕವಾಗಿ ತ್ರೀರ್ಪು ಪ್ರಕಟಿಸಿಲಿದ್ದಾರೆ. ತೀರ್ಪು ಒಂದೇ ಆಗಿಲ್ಲದಿದ್ದರೆ, ಪ್ರಕರಣವನ್ನು ತ್ರಿಸದಸ್ಯ ಪೀಠ ಹೊಸದಾಗಿ ವಿಚಾರಣೆಗೆ ಕೈಗೆತ್ತಿಕೊಳ್ಳುತ್ತದೆ. ಇಬ್ಬರು ನ್ಯಾಯಾಧೀಶರು ಶಶಿಕಲಾ ಅವರು ದೋಷಿ ಎಂದು ಹೇಳಿದರೆ ಶಿಕ್ಷೆ ಅವಧಿ ಪೂರ್ಣಗೊಂಡ ನಂತರವೂ 6 ವರ್ಷ ಅವರು ಚುನಾವಣೆ ಎದುರಿಸುವಂತಿಲ್ಲ. ಶಶಿಕಲಾ ನಿರ್ದೋಷಿ ಎಂದು ಸುಪ್ರೀಂ ಕೋರ್ಟ್ ಹೇಳಿದರೆ, ತಮಿಳುನಾಡು ಮುಖ್ಯಮಂತ್ರಿಯಾಗಲು ಇರುವ ದೊಡ್ಡ ಅಡಚಣೆ ನಿವಾರಣೆಯಾಗುತ್ತದೆ. ಕೂಡಲೇ ಅವರ ಬಹುಮತ ಸಾಬೀತು ಪಡಿಸಿ ಸಿಎಂ ಗಾದಿ ಏರಬಹುದಾಗಿದೆ
ಈ ನಡುವೆ ಶಶಿಕಲಾ ಅವರಿಗೆ ವಿಶ್ವಾಸ ಮತ ಯಾಚಿಸಲು, ಸರ್ಕಾರ ರಚಿಸಲು ರಾಜ್ಯಪಾಲ ವಿದ್ಯಾಸಾಗರ್ ರಾವ್ ಇನ್ನೂ ಅವಕಾಶ ಕೊಟ್ಟಿಲ್ಲ. ತಮಿಳುನಾಡಿನಲ್ಲಿ ಹೊಸ ಸರ್ಕಾರ ರಚಿಸುವುದಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ನೀಡಿರುವ ಕಾನೂನು ಸಲಹೆಯಲ್ಲಿ ಅಟಾರ್ನಿ ಜನರಲ್ (ಎ.ಜಿ) ಮುಕುಲ್ ರೋಹಟಗಿ ಅವರು ವಿಶ್ವಾಸ ಮತ ಯಾಚನೆಯನ್ನು ಒಂದು ವಾರದಲ್ಲಿ ನಡೆಸಬೇಕು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


