ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಶಿಕಲಾ ಅಪರಾಧಿ; 4 ವರ್ಷ ಜೈಲು
ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತೀರ್ಪು ಪ್ರಕಟಿಸಿದ ಸುಪ್ರೀಂ ಕೋರ್ಟ್, ಶಶಿಕಲಾ ಅಪರಾಧಿ ಎಂದು ಘೋಷಿಸಿ, ಅವರಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿದೆ.

Published On :
ನವದೆಹಲಿ: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಇಂದು ತೀರ್ಪು ಪ್ರಕಟಿಸಿದ ಸುಪ್ರೀಂಕೋರ್ಟ್ ವಿಕೆ ಶಶಿಕಲಾ ಅಪರಾಧಿ ಎಂದು ಘೋಷಿಸಿದ್ದು ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಇಡೀ ದೇಶವೇ ಕಾತರದಿಂದ ನಿರೀಕ್ಷಿಸುತ್ತಿದ್ದ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ ಶಶಿಕಲಾ ನಟರಾಜನ್ ಅವರ ವಿರುದ್ಧದ ಅಕ್ರಮ ಆಸ್ತಿ ಪ್ರಕರಣದ ತೀರ್ಪನ್ನು ಸುಪ್ರೀಂ ಕೋರ್ಟ್ ನ ವಿಭಾಗೀಯ ಪೀಠದ ನ್ಯಾಯಮೂರ್ತಿಗಳಾದ ಪಿನಾಕಿ ಚಂದ್ರ ಘೋಷ್ ಮತ್ತು ಅಮಿತಾವ್ ರಾವ್ ಪ್ರಕಟಿಸಿದ್ದಾರೆ.
ಶಶಿಕಲಾಗೆ ನಾಲ್ಕು ವರ್ಷ ಜೈಲು ಶಿಕ್ಷೆ, 10 ಕೋಟಿ ರುಪಾಯಿ ದಂಡ ವಿಧಿಸಿರುವ ಸುಪ್ರೀಂಕೋರ್ಟ್ ಈ ಕೂಡಲೇ ಪೊಲೀಸರಿಗೆ ಶರಣಾಗುವಂತೆ ಸೂಚಿಸಿದೆ. ಈ ಮೂಲಕ ಶಶಿಕಲಾ ಇನ್ನು ನಾಲ್ಕು ವರ್ಷ ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿ ಶಿಕ್ಷೆ ಅನುಭವಿಸಲಿದ್ದಾರೆ.
ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರು ಆದಾಯ ಮೀರಿ ಆಸ್ತಿ ಪ್ರಕರಣದ ಮುಖ್ಯ ಆರೋಪಿಯಾಗಿದ್ದು ಅವರು ಮೃತಪಟ್ಟಿರುವುದರಿಂದ ಅವರನ್ನು ಪ್ರಕರಣದಿಂದ ಕೈಬಿಡಲಾಗಿದ್ದು, ಇನ್ನು ಎರಡನೇ ಆರೋಪಿ ಶಶಿಕಲಾ, ಮೂರನೇ ಆರೋಪಿ ಸುಧಾಕರನ್ ಮತ್ತು ನಾಲ್ಕನೇ ಆರೋಪಿ ಇಳವರಸಿ ಇದೀಗ ಜೈಲು ಸೆರಲಿದ್ದಾರೆ.
ಸುಪ್ರೀಂಕೋರ್ಟ್ ತೀರ್ಪು ಅನ್ವಯ ಇನ್ನು ಆರು ವರ್ಷಗಳ ಕಾಲ ಶಶಿಕಲಾ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ. ಜತೆಗೆ 10 ವರ್ಷಗಳ ಕಾಲ ಯಾವುದೇ ಸ್ಥಾನವನ್ನು ಅಲಂಕರಿಸುವಂತಿಲ್ಲ.
ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಶಶಿಕಲಾರನ್ನು ದೋಷಮುಕ್ತಗೊಳಿಸಿ ಕರ್ನಾಟಕ ಹೈಕೋರ್ಟ್ 2015ರಲ್ಲಿ ಆದೇಶ ನೀಡಿತ್ತು. ಇದನ್ನು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


