ದೇಶ

ಡ್ಯಾನ್ಸ್ ಮಾಡಲು ನಿರಾಕರಿಸಿದ ಸ್ನೇಹಿತನನ್ನು ಕೊಂದ ಗೆಳೆಯ

ಹುಟ್ಟುಹಬ್ಬ ಸಮಾರಂಭದಲ್ಲಿ ಡ್ಯಾನ್ಸ್ ಮಾಡಲು ನಿರಾಕರಿಸಿದ ತನ್ನ ಸ್ನೇಹಿತನನ್ನೇ ವ್ಯಕ್ತಿಯೊಬ್ಬ ಕೊಲೆ ಮಾಡಿರುವ ಘಟನೆ ಮುಂಬಯಿಯಲ್ಲಿ ...

ಡ್ಯಾನ್ಸ್ ಮಾಡಲು ನಿರಾಕರಿಸಿದ ಸ್ನೇಹಿತನನ್ನು ಕೊಂದ ಗೆಳೆಯ
ಸಾಂದರ್ಭಿಕ ಚಿತ್ರ
Published On :

ಮುಂಬಯಿ: ಹುಟ್ಟುಹಬ್ಬ ಸಮಾರಂಭದಲ್ಲಿ ಡ್ಯಾನ್ಸ್ ಮಾಡಲು ನಿರಾಕರಿಸಿದ ತನ್ನ ಸ್ನೇಹಿತನನ್ನೇ ವ್ಯಕ್ತಿಯೊಬ್ಬ ಕೊಲೆ ಮಾಡಿರುವ ಘಟನೆ ಮುಂಬಯಿಯಲ್ಲಿ ನಡೆದಿದೆ.

ನಿನ್ನೆ ರಾತ್ರಿ ಕೇತನ್ ಶಿರ್ವಾಡ್ಕರ್ ಎಂಬಾತನ ಹುಟ್ಟುಹಬ್ಬದ ಪಾರ್ಟಿ ಇತ್ತು. ಪಾರ್ಟಿಗೆ ಸ್ನೇಹಿತರು ಆಗಮಿಸಿದ್ದರು. ಅನುಷ್ಕ್ ಜಾದವ್ ಎಂಬ ಸ್ನೇಹಿತನು ಬಂದಿದ್ದ, ಈ ವೇಳೆ ಹಾಡು ಹಾಕಿದ ಕೇತನ್ ಡ್ಯಾನ್ಸ್ ಮಾಡುವಂತೆ ಅನುಷ್ಕ್ ಜಾದವ್ ಗೆ ಹೇಳಿದ್ದಾನೆ, ಆದರೆ ಡ್ಯಾನ್ಸ್ ಮಾಡಲು ಜಾದವ್ ನಿರಾಕರಿಸಿದ್ದಾನೆ.

ಇಬ್ಬರು ಕೂಡ ಕುಡಿತ ಮತ್ತಿನಲ್ಲಿದ್ದರು. ಈ ವೇಳೆ ಪರಸ್ಪರ ಜಗಳ ಮಾಡಿಕೊಂಡು ಒಬ್ಬರನ್ನೊಬ್ಬರು ಥಳಿಸಿದ್ದಾರೆ. ಅಲ್ಲಿದ್ದ ಬೇರೆ ಸ್ನೇಹಿತರು ಜಗಳ ಬಿಡಿಸಲು ಯತ್ನಿಸಿ ಇಬ್ಬರನ್ನು ಬೇರ್ಪಡಿಸಿದ್ದರು. ಈ ವೇಳೆ ಕೇತನ್ ಮರದ ಹಲಗೆಯಿಂದ ಜಾದವ್ ತಲೆಗೆ ಹೊಡೆದಿದ್ದಾನೆ.

ಕೂಡಲೇ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಜಾಧವ್ ಸಾವನ್ನಪ್ಪಿದ್ದಾನೆ ಎಂದು ಮುಂಬಯಿ ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಆರೋಪಿ ಕೇತನ್ ನನ್ನು ಪೊಲೀಸರು ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.