ಕಾನೂನು ಸಲಹೆ ಆಧರಿಸಿ ಅಂತಿಮ ನಿರ್ಧಾರ ಕೈಗೊಳ್ಳಲಿರುವ ತಮಿಳುನಾಡು ರಾಜ್ಯಪಾಲ ವಿದ್ಯಾಸಾಗರ್ ರಾವ್
ತಮಿಳುನಾಡಿನಲ್ಲಿ ಹೊಸ ಸರ್ಕಾರ ರಚನೆಯ ವಿಷಯದಲ್ಲಿ ಕಾನೂನು ತಜ್ಞರ ಅಭಿಪ್ರಾಯ ಪಡೆದ ನಂತರ ರಾಜ್ಯಪಾಲ ವಿದ್ಯಾಸಾಗರ್ ರಾವ್ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿವೆ.

Published On :
ನವದೆಹಲಿ: ತಮಿಳುನಾಡಿನಲ್ಲಿ ಹೊಸ ಸರ್ಕಾರ ರಚನೆಯ ವಿಷಯದಲ್ಲಿ ಕಾನೂನು ತಜ್ಞರ ಅಭಿಪ್ರಾಯ ಪಡೆದ ನಂತರ ರಾಜ್ಯಪಾಲ ವಿದ್ಯಾಸಾಗರ್ ರಾವ್ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿವೆ.
ಹಿರಿಯ ವಕೀಲ ಸೋಲಿ ಸೊರಾಬ್ಜಿ ಸೇರಿದಂತೆ ಇನ್ನೂ ಇಬ್ಬರು ಕಾನೂನು ತಜ್ಞರ ಅಭಿಪ್ರಾಯ ಪಡೆದ ನಂತರ ತಮಿಳುನಾಡು ರಾಜ್ಯಪಾಲ ವಿದ್ಯಾಸಾಗರ್ ರಾವ್ ಹೊಸ ಸರ್ಕಾರ ರಚನೆಗೆ ಯಾರಿಗೆ ಅವಕಾಶ ನೀಡುವುದರ ಬಗ್ಗೆ ತೀರ್ಮಾನಿಸಲಿದ್ದಾರೆ.
ಕೇಂದ್ರ ಸರ್ಕಾರಕ್ಕೆ ತಾವೇ ಪತ್ರದಲ್ಲಿ ತಿಳಿಸಿರುವಂತೆ ವಿದ್ಯಾಸಾಗರ್ ರಾವ್ ಫೆ.5 ರಂದು ತಮಿಳುನಾಡು ಸಿಎಂ ಹುದ್ದೆಗೆ ಪನ್ನೀರ್ ಸೆಲ್ವಂ ರಾಜೀನಾಮೆ ನೀಡಿದ ಬಳಿಕ ಅಟಾರ್ನಿ ಜನರಲ್ ಮುಕುಲ್ ರೋಹಟ್ಗಿ, ಮಾಜಿ ಸಾಲಿಸಿಟರ್ ಜನರಲ್ ಮೋಹನ್ ಪರಾಶರನ್ ಹಾಗೂ ಸಾಂವಿಧಾನಿಕ ತಜ್ಞ ಸೊರಾಬ್ಜಿಯವರಿಂದ ಸಲಹೆ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ.
ಮೂವರು ತಜ್ಞರ ಪೈಕಿ ಇಬ್ಬರು ಹೊಸ ಸರ್ಕಾರ ರಚನೆಗೆ ಅವಕಾಶ ನೀಡಲು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವ ಮಾರ್ಗವನ್ನು ಸೂಚಿಸಿದ್ದರೆ. 1998 ರಲ್ಲಿ ಉತ್ತರ ಪ್ರದೇಶದಲ್ಲಿ ಸರ್ಕಾರ ರಚನೆಗೆ ಇಬ್ಬರು ಹಕ್ಕು ಮಂಡಿಸಿದ್ದ ವೇಳೆ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿತ್ತು. ಈಗ ಇದೇ ಮಾದರಿಯನ್ನು ತಮಿಳುನಾಡಿನಲ್ಲೂ ಅನುಸರಿಸಬಹುದಾಗಿದೆ ಎಂದು ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಸೊರಾಬ್ಜಿಯವರ ಪ್ರಕಾರ ಒಂದು ವಾರದೊಳಗೆ ಬಹುಮತ ಸಾಬೀತುಪಡಿಸುವಂತೆ ಸೂಚಿಸಿ, ಹಕ್ಕು ಮಂಡಿಸಿರುವ ಇಬ್ಬರು ನಾಯಕರ ಪೈಕಿ ಅತಿ ಹೆಚ್ಚು ಶಾಸಕರು ಯಾರನ್ನು ಬೆಂಬಲಿಸುತ್ತಾರೋ ಅವರಿಗೆ ಸರ್ಕಾರ ರಚನೆಗೆ ಅವಕಾಶ ನೀಡಬೇಕೆಂದು ಹೇಳಿದ್ದಾರೆ. ಒಟ್ಟಾರೆ ಕಾನೂನು ತಜ್ಞರ ಅಭಿಪ್ರಾಯ ಪಡೆದ ನಂತರ ರಾಜ್ಯಪಾಲ ವಿದ್ಯಾಸಾಗರ್ ರಾವ್ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


