ದೇಶ

ಕೋಲ್ಕತಾ ಆಸ್ಪತ್ರೆಯಲ್ಲಿ ಹಿಂಸಾಚಾರ: ಮೂವರ ಬಂಧನ

ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿಯೊಬ್ಬಳು ಇದ್ದಕ್ಕಿದ್ದಂತೆ ಸಾವನ್ನಪ್ಪಿದ ಕಾರಣ ಕೋಲ್ಕತಾ ನಗರದ ಆಸ್ಪತ್ರೆಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಹಿಂಸಾಚಾರದಲ್ಲಿ ಭಾಗಿಯಾದ ಮೂವರನ್ನು ಪೊಲೀಸರು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ...

ಕೋಲ್ಕತಾ ಆಸ್ಪತ್ರೆಯಲ್ಲಿ ಹಿಂಸಾಚಾರ: ಮೂವರ ಬಂಧನ
ಸಾಂದರ್ಭಿಕ ಚಿತ್ರ
Published On :

ಕೋಲ್ಕತಾ: ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿಯೊಬ್ಬಳು ಇದ್ದಕ್ಕಿದ್ದಂತೆ ಸಾವನ್ನಪ್ಪಿದ ಕಾರಣ ಕೋಲ್ಕತಾ ನಗರದ ಆಸ್ಪತ್ರೆಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಹಿಂಸಾಚಾರದಲ್ಲಿ ಭಾಗಿಯಾದ ಮೂವರನ್ನು ಪೊಲೀಸರು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ.

ಬಾಲಕಿಯ ಸಾವಿನಿಂದ ಆಕ್ರೋಶಭರಿತರಾದ ಉದ್ರಿಕ್ತರ ತಂಡವೊಂದು ನೂರಾರು ಸಂಖ್ಯೆಯಲ್ಲಿ ಜನರನ್ನು ಕರೆತಂದು ಏಕಬಲಪುರದಲ್ಲಿರುವ ಸಿಎಂಆರ್'ಐ ಆಸ್ಪತ್ರೆಯ ಮೇಲೆ ನಿನ್ನೆ ದಾಳಿ ನಡೆಸಿತ್ತು. ದಾಳಿ ವೇಳೆ ಆಸ್ಪತ್ರೆಯ ಪೀಠೋಪಕರಣಗಳು, ಕಂಪ್ಯೂಟರ್ ಹಾಗೂ ಇನ್ನಿತರೆ ಸಲಕರಣೆಗಳನ್ನು ಧ್ವಂಸ ಮಾಡಿದ್ದರು. ಅಲ್ಲದೆ, ಆಸ್ಪತ್ರೆಯ ಸಿಬ್ಬಂದಿಗಳ ಮೇಲೆ ನಡೆಸಿದ್ದರು.

ಪ್ರಕರಣ ಸಂಬಂಧ ಇದೀಗ ಮೂವರು ಆರೋಪಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತರನ್ನು ರಾಕೇಶ್ ಧಾನುಕ್ (25), ಜಿಯಾದ್ದೀನ್ (22) ಮತ್ತು ಎಸ್.ಕೆ. ಸೋನಿ (22) ಎಂದು ಗುರ್ತಿಸಲಾಗಿದೆ. ಬಂಧಿತ ಆರೋಪಿಗಳು ಖಿಡಿರ್ಪೊರೆ ಪ್ರದೇಶದ ನಿವಾಸಗಳಾಗಿದ್ದಾರೆಂದು ಕೋಲ್ಕತಾ ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಆಸ್ಪತ್ರೆಯ ಆವರಣದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಮೂವರು ಆರೋಪಿಗಳನ್ನು ಬಂಧನಕ್ಕೊಳಪಡಿಸಲಾಗಿದೆ. ನಿನ್ನೆ ನಡೆದ ಹಿಂಸಾಚಾರದಲ್ಲಿ ಆರೋಪಿಗಳು ಆಸ್ಪತ್ರೆಯ ಮೇಲೆ ದಾಳಿ ನಡೆಸಿದ್ದರು. ಪ್ರಕರಣ ಸಂಬಂಧ ತನಿಖೆಯನ್ನು ಮುಂದುವರೆಸಲಾಗಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.