ಬಿಹಾರ: ಕಟಿಹಾರದಲ್ಲಿ ಆಟೋ ಮಗುಚಿ ಬಿದ್ದು 6 ಮಂದಿ ಸಾವು, 10 ಜನಕ್ಕೆ ಗಾಯ
ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ಮೃತಪಟ್ಟ ಘಟನೆ ಬಿಹಾರದ ಕಟಿಹಾರ ನಗರದಲ್ಲಿ...

Published On :
ಕಟಿಹಾರ್: ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ಮೃತಪಟ್ಟ ಘಟನೆ ಬಿಹಾರದ ಕಟಿಹಾರ ನಗರದಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.
ಆಟೋದಲ್ಲಿ ಒಂದೇ ಕುಟುಂಬದ 16 ಮಂದಿ ಪ್ರಯಾಣಿಸುತ್ತಿದ್ದರು. ನಿಯಂತ್ರಣ ಕಳೆದುಕೊಂಡ ಆಟೋ ರಸ್ತೆಯ ಪಕ್ಕ ಕಂದಕಕ್ಕೆ ಜಾರಿ ಮಗುಚಿ ಬಿದ್ದಿತು. ಘಟನೆಯಲ್ಲಿ 10 ಮಂದಿಗೆ ಗಾಯಗಳಾಗಿವೆ.
ಕುರ್ಸೆಲಾ ಥಾಣೆಯ ಹತ್ತಿರ ಗ್ವಾಲ್ ತೊಲಿ ಮಂದಿರ ಸಮೀಪ ಈ ಘಟನೆ ನಡೆದಿದೆ.
ದೇವಗಾರ್ ದೇವಸ್ಥಾನದಲ್ಲಿ ಮುಂಡನ ಸಮಾರಂಭ ಮುಗಿಸಿ ಒಂದೇ ಕುಟುಂಬದ 16 ಮಂದಿ ತಮ್ಮ ಊರಿಗೆ ಮರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಮಾಹಿತಿ ಪಡೆದ ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿದರು.ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


