ದೇಶ

ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ: ಸ್ಪಷ್ಟನೆ ನೀಡುವಂತೆ ಶಶಿಕಲಾ ಗೆ ಚು. ಆಯೋಗದ ಸೂಚನೆ

ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ಬಗ್ಗೆ ಸ್ಪಷ್ಟನೆ ನೀಡಬೇಕೆಂದು ಚುನಾವಣಾ ಆಯೋಗ ವಿಕೆ ಶಶಿಕಲಾ ಅವರಿಗೆ ಸೂಚನೆ ನೀಡಿದೆ.

ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ: ಸ್ಪಷ್ಟನೆ ನೀಡುವಂತೆ ಶಶಿಕಲಾ ಗೆ ಚು. ಆಯೋಗದ ಸೂಚನೆ
ವಿಕೆ ಶಶಿಕಲಾ
Published On :
ಚೆನ್ನೈ: ವಿಕೆ ಶಶಿಕಲಾ ಅವರನ್ನು ಎಐಎಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿಯನ್ನಾಗಿ ಮಾಡಿರುವುದನ್ನು ಪ್ರಶ್ನಿಸಿದ್ದ ತಮಿಳುನಾಡು ಮಾಜಿ ಸಿಎಂ ಪನ್ನೀರ್ ಸೆಲ್ವಂ ಬಣದ ಅರ್ಜಿಯನ್ನು ಚುನಾವಣಾ ಆಯೋಗ ಮಾನ್ಯ ಮಾಡಿದೆ. 
ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ಬಗ್ಗೆ ಸ್ಪಷ್ಟನೆ ನೀಡಬೇಕೆಂದು ಚುನಾವಣಾ ಆಯೋಗ ವಿಕೆ ಶಶಿಕಲಾ ಅವರಿಗೆ ಸೂಚನೆ ನೀಡಿದೆ. ಫೆ.28 ರೊಳಗೆ ತಮ್ಮ ಹುದ್ದೆಯ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ವಿಕೆ ಶಶಿಕಲಾ ಅವರಿಗೆ ಚುನಾವಣಾ ಆಯೋಗ ಸೂಚಿಸಿದೆ. 
ಚುನಾವಣಾ ಆಯೋಗ ಸ್ಪಷ್ಟನೆ ಕೇಳಿರುವುದು ವಿಕೆ ಶಶಿಕಲಾ ಅವರಿಗೆ ಮತ್ತೊಂದು ಸವಾಲಿನ ಸಂಗತಿಯಾಗಿದ್ದು, ಫೆ.28 ರೊಳಗೆ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಗೊಂಡಿರುವುದರ ಬಗ್ಗೆ ಸಂಪೂರ್ಣ ವಿವರಣೆ ನೀಡಿ ಸಮರ್ಥನೆ ನೀಡಬೇಕಿದೆ. 
ಪನ್ನೀರ್​ ಸೆಲ್ವಂ ಗುಂಪಿನಲ್ಲಿರುವ ರಾಜ್ಯಸಭಾ ಸದಸ್ಯ ಮೈತ್ರಿಯನ್​​ ಶಶಿಕಲಾ ಅವರನ್ನು ಪ್ರಧಾನ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಿರುವುದನ್ನು ಪ್ರಶ್ನಿಸಿ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.