ಕಾರಿನ ಮೇಲೆ ದಾಳಿ: ವಿಪಕ್ಷಗಳ ವಿರುದ್ದ ಹರಿಹಾಯ್ದ ಮನೋಜ್ ತಿವಾರಿ
ಕಾರಿನ ಮೇಲೆ ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿಯವರು ವಿರೋಧ ಪಕ್ಷಗಳ ವಿರುದ್ಧ ಶುಕ್ರವಾರ ತೀವ್ರವಾಗಿ ಕಿಡಿಕಾರಿದ್ದಾರೆ...

ಮುಂಬೈ: ಕಾರಿನ ಮೇಲೆ ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಬಿಜೆಪಿ ಮುಖ್ಯಸ್ಥ ಮನೋಜ್ ತಿವಾರಿಯವರು ವಿರೋಧ ಪಕ್ಷಗಳ ವಿರುದ್ಧ ಶುಕ್ರವಾರ ತೀವ್ರವಾಗಿ ಕಿಡಿಕಾರಿದ್ದಾರೆ.
ನಿನ್ನೆಯಷ್ಟೇ ಮುಂಬೈ ನಲ್ಲಿ ಮನೋಜ್ ತಿವಾರಿಯವರ ಕಾರಿನ ಮೇಲೆ ಅನಾಮಧೇಯ ವ್ಯಕ್ತಿಗಳು ದಾಳಿ ನಡೆಸಿ, ಪರಾರಿಯಾಗಿದ್ದರು.
ಪ್ರಕರಣ ಸಂಬಂಧ ವಿರೋಧ ಪಕ್ಷಗಳ ವಿರುದ್ಧ ಕಿಡಿಕಾರಿರುವ ಮನೋಜ್ ತಿವಾರಿಯವರು, ಘಟನೆ ನಿಜಕ್ಕೂ ಆಶ್ಚರ್ಯವನ್ನುಂಟು ಮಾಡಿದೆ. ಏನೇ ಆದರೂ ಜನರು ನನಗೆ ಬೆಂಬಲವನ್ನು ನೀಡುತ್ತಿದ್ದಾರೆ. ವಿರೋಧ ಪಕ್ಷಗಳೇ ನನ್ನ ಕಾರಿನ ಮೇಲೆ ದಾಳಿ ಮಾಡಿವೆ. ದಾಳಿ ಮೂಲಕ ನನಗೆ ಬೆದರಿಕೆ ಹಾಕಲು ಯತ್ನ ನಡೆಸಿವೆ. ಆದರೆ, ಇದರಿಂದ ನಾನು ಧೈರ್ಯಗೆಟ್ಟಿಲ್ಲ ಎಂದು ಹೇಳಿದ್ದಾರೆ.
ದಾಳಿ ಸಂಬಂಧ ಈಗಾಗಲೇ ಪೊಲೀಸರ ಬಳಿ ಪ್ರಕರಣವನ್ನು ದಾಖಲಿಸಲಾಗಿದೆ. ಇದೀಗ ಪೊಲೀಸರು ತನಿಖೆ ಆರಂಭಿಸಿದ್ದಾರೆ. ನಾನೀಗ ಮುಂಬೈನಲ್ಲಿದ್ದೇನೆ. ಇಲ್ಲಿ ನನ್ನ ಮನೆಯಿದೆ. ಮನೆಯ ಎದುರಿಗೇ ಈ ರೀತಿಯ ಘಟನೆ ನಡೆದಿರುವುದು ನಿಜಕ್ಕೂ ಗಂಭೀರ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


