ದೇಶ

ಸೇನಾ ಮುಖ್ಯಸ್ಥರ ಹೇಳಿಕೆ ಅಗತ್ಯವಿರಲಿಲ್ಲ: ಕಾಂಗ್ರೆಸ್

ರಾವತ್ ಅವರ ಹೇಳಿಕೆಯಿಂದ ಕಾಶ್ಮೀರದಲ್ಲಿ ಶಾಂತಿ ಕದಡಲಿದ್ದು, ಸೇನಾ ಮುಖ್ಯಸ್ಥರ ಹೇಳಿಕೆ ಅಗತ್ಯವಿರಲಿಲ್ಲ ಎಂದು ಕಾಂಗ್ರೆಸ್ ಶನಿವಾರ ಹೇಳಿದೆ...

ಸೇನಾ ಮುಖ್ಯಸ್ಥರ ಹೇಳಿಕೆ ಅಗತ್ಯವಿರಲಿಲ್ಲ: ಕಾಂಗ್ರೆಸ್
ಸೇನಾ ಮುಖ್ಯಸ್ಥ ಬಿಪಿನ್ ರಾವತ್
Published On :

ನವದೆಹಲಿ: ರಾವತ್ ಅವರ ಹೇಳಿಕೆಯಿಂದ ಕಾಶ್ಮೀರದಲ್ಲಿ ಶಾಂತಿ ಕದಡಲಿದ್ದು, ಸೇನಾ ಮುಖ್ಯಸ್ಥರ ಹೇಳಿಕೆ ಅಗತ್ಯವಿರಲಿಲ್ಲ ಎಂದು ಕಾಂಗ್ರೆಸ್ ಶನಿವಾರ ಹೇಳಿದೆ.

ಈ ಕುರಿತಂತೆ ಮಾತನಾಡಿರುವ ಕಾಂಗ್ರೆಸ್ ನಾಯಕ ಟಾಮ್ ವಡಕ್ಕನ್ ಅವರು, ಜಮ್ಮು ಮತ್ತು ಕಾಶ್ಮೀರದ ವಿಚಾರದಲ್ಲಿ ವಿರೋಧ ಪಕ್ಷಗಳು ಯಾವಾಗಲೂ ಒಗ್ಗಟ್ಟನ್ನು ಪ್ರದರ್ಶಿಸಿವೆ. ಸೇನಾ ಮುಖ್ಯಸ್ಥರ ಈ ರೀತಿಯ ಹೇಳಿಕೆ ಕಾಶ್ಮೀರದಲ್ಲಿ ಶಾಂತಿಯನ್ನು ಕದಡಲಿದ್ದು, ಈ ರೀತಿಯ ಹೇಳಿಕೆ ನೀಡುವ ಅಗತ್ಯವಿರಲಿಲ್ಲ ಎಂದು ಹೇಳಿದ್ದಾರೆ.

ಸೇನಾ ಮುಖ್ಯಸ್ಥರ ಹೇಳಿಕೆ ಬಳಿಕ ಕಾಶ್ಮೀರದಲ್ಲಿ ಗ್ರೆನೇಡ್ ಹಾಗೂ ಕಲ್ಲು ತೂರಾಟದಂತಹ ಘಟನೆಗಳು ನಡೆಯುತ್ತಿವೆ. ಹೇಳಿಕೆ ನೀಡುವ ಅಗತ್ಯವೇನಿತ್ತು?...ದೇಶವನ್ನು ರಕ್ಷಣೆ ಮಾಡುವ ಸೇನೆ ಈ ರೀತಿಯ ಹೇಳಿಕೆ ನೀಡಬಾರದು. ಹೇಳಿಕೆ ನೀಡಲು ಸೇನಾ ಮುಖ್ಯಸ್ಥರು ಸಂಸದರಲ್ಲ. ಸೇನೆ ಅತ್ಯಂತ ಜಾಗರೂಕತೆಯಿಂದ ಹಾಗೂ ಪರಿಣಾಮಕಾರಿಯಾಗಿರುತ್ತದೆ ಎಂಬುದನ್ನು ನಾವು ಒಪ್ಪಿಕೊಳ್ಳುತ್ತೇವೆ. ಆದರೆ, ಈ ರೀತಿಯ ಹೇಳಿಕೆಗಳ ಅಗತ್ಯವಿರಲಿಲ್ಲ ಎಂದು ತಿಳಿಸಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಹೇಳಿಕೆ ನೀಡಿದ್ದ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು, ಕಾರ್ಯಾಚರಣೆ ವೇಳೆ ಸ್ಥಳೀಯರು ವಿರೋಧ ವ್ಯಕ್ತಪಡಿಸುವುದರಿಂದ ಭದ್ರತಾ ಸಿಬ್ಬಂದಿಗಳ ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಸ್ಥಳೀಯರು ಭಯೋತ್ಪಾದಕರಿಗೆ ತಪ್ಪಿಸಿಕೊಳ್ಳಲು ನೆರವು ಮಾಡಿಕೊಡುವಂತಹ ಘಟನೆಗಳೂ ನಡೆಯುತ್ತಿವೆ. ಸ್ಥಳೀಯ ಯುವಕರು ಪಾಕಿಸ್ತಾನ, ಐಎಸ್ಐಎಸ್ ಧ್ವಜಗಳನ್ನು ಹಿಡಿದು ಸೇನಾ ಕಾರ್ಯಾಚರಣೆಗೆ ಅಡ್ಡಿ ಪಡಿಸಿದರೆ ಮುಲಾಜಿಲ್ಲದೇ ಅವರನ್ನು ರಾಷ್ಟ್ರದ್ರೋಹಿ, ಭಯೋತ್ಪಾದಕರ ಕಾರ್ಯಕರ್ತರೆಂದು ಪರಿಗಣಿಸಲಾಗುತ್ತದೆ ಎಂದು ಕಠಿಣ ಸಂದೇಶವನ್ನು ರವಾನಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.