ಡಿಡಿಸಿಎ ಪ್ರಕರಣ: ಮಾರ್ಚ್ 21ಕ್ಕೆ ಕೋರ್ಟ್ ಗೆ ಹಾಜರಾಗುವಂತೆ ಕೇಜ್ರಿವಾಲ್ ಗೆ ಸೂಚನೆ
ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆಯ (ಡಿಡಿಸಿಎ) ಹಾಗೂ ಚೇತನ್ ಚೌಹ್ವಾಣ್ ಅವರು ದಾಖಲಿಸಿರುವ ಕ್ರಿಮಿನಲ್ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ...

Published On :
ನವದೆಹಲಿ: ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆಯ (ಡಿಡಿಸಿಎ) ಹಾಗೂ ಚೇತನ್ ಚೌಹ್ವಾಣ್ ಅವರು ದಾಖಲಿಸಿರುವ ಕ್ರಿಮಿನಲ್ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 21ರಂದು ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿ ಕೋರ್ಟ್ ಶನಿವಾರ ಸೂಚಿಸಿದೆ.
ತಾವು ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಫೆ.22ರಂದು ದೆಹಲಿಗೆ ವಾಪಸ್ ಆಗುತ್ತಿರುವುದರಿಂದ ಖುದ್ದು ಹಾಜರಾತಿಯಿಂದ ವಿನಾಯ್ತಿ ಕೋರಿ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಮನವಿಯನ್ನು ಸ್ವೀಕರಿಸಿದ ಮೆಟ್ರೊಪೊಲಿಟ್ ಮ್ಯಾಜಿಸ್ಟ್ರೇಟ್ ಅಭಿಲಾಶ್ ಮಲ್ಹೊತ್ರಾ ಅವರು, ಮಾರ್ಚ್ 21ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
ಇದೇ ವೇಳೆ ಕೇಜ್ರಿವಾಲ್ ಜೊತೆ ಮಾನಹಾನಿ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ಅಮಾನತುಗೊಂಡ ಬಿಜೆಪಿ ಸಂಸದ ಕಿರ್ತಿ ಆಜಾದ್ ಅವರಿಗೆ 10 ಸಾವಿರ ರುಪಾಯಿ ವೈಯಕ್ತಿಕ ಬಾಂಡ್ ಮೇಲೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


