ಡಿಎಂಕೆ ದೇಶ ವಿರೋಧಿ ಪಕ್ಷ, ಡಿಎಂಕೆಗಿಂತ ಶಶಿಕಲಾ ಉತ್ತಮ: ಸುಬ್ರಮಣಿಯನ್ ಸ್ವಾಮಿ
ಮುಖ್ಯಮಂತ್ರಿ ಪಳನಿಸ್ವಾಮಿ ವಿಶ್ವಾಸ ಮತ ಯಾಚನೆ ವೇಳೆ ತಮಿಳುನಾಡು ವಿಧಾಸಭೆಯಲ್ಲಿ ಪ್ರತಿಭಟನೆ ತಾರಕ್ಕೇರಿರುವ ಹಿನ್ನಲೆಯಲ್ಲಿ ಡಿಎಂಕೆ ವಿರುದ್ಧ ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಶನಿವಾರ ಕಿಡಿಕಾರಿದ್ದಾರೆ...

ಚೆನ್ನೈ: ಮುಖ್ಯಮಂತ್ರಿ ಪಳನಿಸ್ವಾಮಿ ವಿಶ್ವಾಸ ಮತ ಯಾಚನೆ ವೇಳೆ ತಮಿಳುನಾಡು ವಿಧಾಸಭೆಯಲ್ಲಿ ಪ್ರತಿಭಟನೆ ತಾರಕ್ಕೇರಿರುವ ಹಿನ್ನಲೆಯಲ್ಲಿ ಡಿಎಂಕೆ ವಿರುದ್ಧ ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಶನಿವಾರ ಕಿಡಿಕಾರಿದ್ದಾರೆ.
ಗುಪ್ತಮತದಾನಕ್ಕೆ ಆಗ್ರಹಿ ತಮಿಳುನಾಡು ವಿಧಾನಸಭೆಯಲ್ಲಿ ಡಿಎಂಕೆ ಶಾಸಕರು ನಡೆಸುತ್ತಿರುವ ಪ್ರತಿಭಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಸುಬ್ರಮಣಿಯನ್ ಸ್ವಾಮಿ ಅವರು, ಡಿಎಂಕೆ ಹಿಂಸಾತ್ಮಕ ಹಾಗೂ ದೇಶ ವಿರೋಧಿ ಪಕ್ಷವಾಗಿದ್ದು, ಡಿಎಂಕೆಗೆ ಹೋಲಿಕೆ ಮಾಡಿದರೆ, ಶಶಿಕಲಾ ಉತ್ತಮವಾಗಿದ್ದಾರೆಂದು ಹೇಳಿದ್ದಾರೆ.
ಪಳನಿಸ್ವಾಮಿ ವಿಶ್ವಾಸ ಮತ ಯಾಚನೆ ವೇಳೆ ತಮಿಳುನಾಡು ವಿಧಾನಸಭೆಯಲ್ಲಿ ಭಾರೀ ಕೋಲಾಹಲ ಸೃಷ್ಟಿಯಾಗಿದ್ದು, ಗುಪ್ತಮತದಾನಕ್ಕೆ ಆಗ್ರಹಿ ಡಿಎಂಕೆ ಶಾಸಕರು ನಡೆಸಿದ ಪ್ರತಿಭಟನೆ ತಾರಕಕ್ಕೇರಿದೆ.
ಸ್ಪೀಕರ್ ಧನಪಾಲ್ ಅವರು ಗುಪ್ತಮತದಾನಕ್ಕೆ ಅವಕಾಶ ನೀಡದೇ, ತಮ್ಮ ನಿರ್ಣಯವೇ ಅಂತಿಮ ಎಂದು ಹೇಳಿದ್ದಕ್ಕೆ ಆಕ್ರೋಶಗೊಂಡ ಡಿಎಂಕೆ ಶಾಸಕರು ಏಕಾಏಕಿ ಸ್ಪೀಕರ್ ಅವರತ್ತ ನುಗ್ಗಿ, ಕೈಗೆ ಸಿಕ್ಕ ವಸ್ತುಗಳನ್ನೆಲ್ಲಾ ಚೆಲ್ಲಾಪಿಲ್ಲಿ ಮಾಡಿದ್ದಾರೆ. ಅಲ್ಲದೆ, ಸ್ಪೀಕರ್ ಅವರ ಕುರ್ಚಿ ಮತ್ತು ಟೇಬಲ್ ಗಳನ್ನು ಧ್ವಂಸಗೊಳಿಸಿದ್ದಾರೆಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


