ನಿರುದ್ಯೋಗಿಗಳಾರುವುದರಿಂದ ಮುಸ್ಲಿಮರು ಹೆಚ್ಚಾಗಿ ಮಕ್ಕಳನ್ನು ಹೆರುತ್ತಾರೆ: ಅಜಂ ಖಾನ್
ಮುಸ್ಲಿಮರಲ್ಲಿ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಾಗಿರುವುದರಿಂದಲೇ ಮುಸ್ಲಿಂ ಜನಸಂಖ್ಯೆ ಹೆಚ್ಚಳವಾಗಿದೆ ಎಂದು ಸಮಾಜವಾದಿ ಪಕ್ಷ ನಾಯಕ ಅಜಂ ಖಾನ್ ಅವರು ಶುಕ್ರವಾರ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ...

ಲಖನೌ: ಮುಸ್ಲಿಮರಲ್ಲಿ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಾಗಿರುವುದರಿಂದಲೇ ಮುಸ್ಲಿಂ ಜನಸಂಖ್ಯೆ ಹೆಚ್ಚಳವಾಗಿದೆ ಎಂದು ಸಮಾಜವಾದಿ ಪಕ್ಷ ನಾಯಕ ಅಜಂ ಖಾನ್ ಅವರು ಶುಕ್ರವಾರ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.
ಉತ್ತರಪ್ರದೇಶ ಕನೌಜ್ ನಲ್ಲಿ ಆಯೋಜಿಸಲಾಗಿದ್ದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿರುವ ಅವರು, ಮುಸ್ಲಿಮರಿಗೆ ಮಾಡಲು ಕೆಲಸವಿಲ್ಲ ಹಾಗೂ ಬಹುತೇಕ ಮುಸ್ಲಿಮರು ನಿರುದ್ಯೋಗಿಗಳಾಗಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನ್ನು ಹೆರುತ್ತಾರೆ ಎಂದು ಹೇಳಿದ್ದಾರೆ.
ಅಲ್ಪಸಂಖ್ಯಾತ ಸಮುದಾಯಕ್ಕೆ ಕೆಲಸಕೊಟ್ಟರೆ, ಮಕ್ಕಳನ್ನು ಹೆರುವುದನ್ನು ಅವರೂ ಕಡಿಮೆ ಮಾಡುತ್ತಾರೆ. ಮಕ್ಕಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಹೆರುವುದನ್ನು ಹಿಂದೂಗಳು ಮುಸ್ಲಿಮರಿಂದ ಕಲಿತಿದ್ದಾರೆಂದು ಹೇಳಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಹೇಳಿಕೆ ನೀಡಿದ್ದ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಅವರು, ದೇಶದಲ್ಲಿ ಜನಸಂಖ್ಯೆ ಏರಿಕೆಯಾಗಲು ನಾಲ್ಕು ಪತ್ನಿಯರು, 40 ಮಕ್ಖಳು ಹೊಂದಬೇಕೆಂಬ ಪರಿಕಲ್ಪನೆಯನ್ನು ಅನುಸರಿಸುತ್ತಿರುವವರೇ ಕಾರಣರಾಗಿದ್ದು, ಕೇಂದ್ರ ಸರ್ಕಾರ ಶೀಘ್ರದಲ್ಲಿಯೇ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಬೇಕಿದೆ. ಮಹಿಳೆಯರು ಕೇವಲ ಮಕ್ಕಳನ್ನು ಹೆರುವ ಯಂತ್ರಗಳಲ್ಲ. ತಾಯಿಯಂದಿರು ಹಿಂದೂಗಳೇ ಆಗಲಿ ಮುಸ್ಲಿಮರೇ ಅಗಲೀ ಅವರಿಗೆ ಗೌರವ ನೀಡಬೇಕೆಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


