ಡಿಎಂಕೆ ಮುಖ್ಯಸ್ಥ ಸ್ಟಾಲಿನ್ ವಿರುದ್ಧ ಎಫ್ಐಆರ್ ದಾಖಲು
ವಿಧಾನಸಭೆಯಲ್ಲಿ ನಡೆಯುತ್ತಿದ್ದ ವಿಶ್ವಾಸ ಮತಯಾಚನೆ ವೇಳೆ ತೀವ್ರ ಪ್ರತಿಭಟನೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಎಂಕೆ ಪಕ್ಷದ ಮುಖ್ಯಸ್ಥ ಎಂ.ಕೆ. ಸ್ಟಾಲಿನ್ ವಿರುದ್ಧ ಎಫ್ಐಆರ್ ದಾಖಲಾಗಿರುವುದಾಗಿ ಭಾನುವಾರ...

ಚೆನ್ನೈ: ವಿಧಾನಸಭೆಯಲ್ಲಿ ನಡೆಯುತ್ತಿದ್ದ ವಿಶ್ವಾಸ ಮತಯಾಚನೆ ವೇಳೆ ತೀವ್ರ ಪ್ರತಿಭಟನೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಎಂಕೆ ಪಕ್ಷದ ಮುಖ್ಯಸ್ಥ ಎಂ.ಕೆ. ಸ್ಟಾಲಿನ್ ವಿರುದ್ಧ ಎಫ್ಐಆರ್ ದಾಖಲಾಗಿರುವುದಾಗಿ ಭಾನುವಾರ ತಿಳಿದುಬಂದಿದೆ.
ತಮಿಳುನಾಡು ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆ ಅನುಸರಿಸಿದ ಕ್ರಮ ನಿಯಮ ಬಾಹಿರವಾದುದು ಎಂದು ದೂರಿದ್ದ ಡಿಎಂಕೆ ಮುಖಂಡ ಸ್ಟಾಲಿನ್ ಹಾಗೂ ಪಕ್ಷದ ಕಾರ್ಯಕರ್ತರು ನಿನ್ನೆಯಷ್ಟೇ ಮರೀನಾ ಬೀಚ್ ಬಳಿ ಪ್ರತಿಭಟನೆಗಿಳಿದಿದ್ದರು. ಹಿನ್ನಲೆಯಲ್ಲಿ ಸ್ಟಾಲಿನ್ ಸೇರಿದಂತೆ ಪ್ರತಿಭಟನಾ ನಿರತ ಕಾರ್ಯಕರ್ತರನ್ನು ಪೊಲೀಸರು ಬಂಧನಕ್ಕೊಳಪಡಿಸಿ ನಂತರ ಬಿಡುಗಡೆಗೊಳಿಸಿದ್ದರು.
ಇದೀಗ ಸ್ಟಾಲಿನ್ ವಿರುದ್ಧ ತಮಿಳುನಾಡು ರಾಜ್ಯ ಪೊಲೀಸರು ಪ್ರಕರಣ ಸಂಬಂಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.
ರಾಜ್ಯದ ರಾಜಕೀಯದಲ್ಲಾಗುತ್ತಿರುವ ಬೆಳವಣಿಗೆ ಹಿನ್ನಲೆಯಲ್ಲಿ ಸ್ಟಾಲಿನ್ ಅವರು ಡಿಎಂಕೆ ಪ್ರಧಾನಕಚೇರಿಯಲ್ಲಿ ಪಕ್ಷದ ಎಲ್ಲಾ ಶಾಸಕರನ್ನು ಕರೆದು ವಿಶೇಷ ಸಭೆಯನ್ನು ನಡೆಸುತ್ತಿದ್ದಾರೆಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


