ಉತ್ತರಪ್ರದೇಶ 3ನೇ ಹಂತದ ಚುನಾವಣೆ: ಶೇ.38 ರಷ್ಟು ಮತದಾನ
ಬಹು ನಿರೀಕ್ಷಿತ ಉತ್ತರಪ್ರದೇಶ ವಿಧಾನಸಭಾ ಚುನಾವಣೆ 7 ಹಂತದ ಪೈಕಿ 3ನೇ ಹಂತದ ಮತದಾನ ಪ್ರಕ್ರಿಯೆ ಆರಂಭಗೊಂಡಿದ್ದು, ಈವರೆಗೂ ಶೇ.38ರಷ್ಟು ಮತದಾನವಾಗಿರುವುದಾಗಿ....

ಲಖನೌ: ಬಹು ನಿರೀಕ್ಷಿತ ಉತ್ತರಪ್ರದೇಶ ವಿಧಾನಸಭಾ ಚುನಾವಣೆ 7 ಹಂತದ ಪೈಕಿ 3ನೇ ಹಂತದ ಮತದಾನ ಪ್ರಕ್ರಿಯೆ ಆರಂಭಗೊಂಡಿದ್ದು, ಈವರೆಗೂ ಶೇ.38ರಷ್ಟು ಮತದಾನವಾಗಿರುವುದಾಗಿ ಭಾನುವಾರ ತಿಳಿದುಬಂದಿದೆ.
ಚುನಾವಣಾ ಪ್ರಕ್ರಿಯೆಯಲ್ಲಿ ಈ ವರೆಗೂ ಶೇ.38ರಷ್ಟು ಮತದಾನವಾಗಿರುವುದಾಗಿ ಉತ್ತರಪ್ರದೇಶದ ಚುನಾವಣಾ ಆಯೋಗದ ಮುಖ್ಯಸ್ಥರು ಹೇಳಿದ್ದಾರೆ.
ಚುನಾವಣಾ ಪ್ರಕ್ರಿಯೆ ಆರಂಭವಾಗಿರುವ ಹಿನ್ನಲೆಯಲ್ಲಿ ಬಹುಜನ ಸಮಾಜಪಕ್ಷದ ಮುಖ್ಯಸ್ಥೆ ಮಾಯಾವತಿ ಹಾಗೂ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ತಮ್ಮ ತಮ್ಮ ಕುಟುಂಬದ ಸದಸ್ಯರೊಡನೆ ಬಂದು ಲಖನೌನಲ್ಲಿ ಮತ ಹಕ್ಕು ಚಲಾಯಿಸಿದರು. ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾವದ್ ಅವರು ಕೂಡ ಸೈಫೈನಲ್ಲಿ ತಮ್ಮ ಮತ ಹಕ್ಕು ಚಲಾಯಿಸಿದರು.
ಉತ್ತರಪ್ರದೇಶ ವಿಧಾನಸಭಾ ಚುನಾವಣೆ 7 ಹಂತದ ಪೈಕಿ 3ನೇ ಹಂತದ ಮತದಾನ ಆರಂಭಗೊಂಡಿದ್ದು, ಲಖನೌ, ಕನೌಜ್, ಮೈನ್ ಪುರಿ ಮತ್ತು ಇಟಾವಾ ಜಿಲ್ಲಾ ಕ್ಷೇತ್ರಗಳು ಸೇರಿದಂತೆ ಒಟ್ಟು 69 ಸ್ಥಾನಗಳಿಗೆ ಮತದಾನ ನಡೆಯಲಿದೆ. ಸುಮಾರು 2.4 ಕೋಟಿ ಮತದಾರರು ಮತದಾನಕ್ಕೆ ಅರ್ಹರಾಗಿದ್ದು, 826 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


