ದೇಶ

ಫತೇಪುರ್ ರ್ಯಾಲಿ ಹೇಳಿಕೆ: ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

ಉತ್ತರಪ್ರದೇಶದ ಫತೇಪುರ್ ರ್ಯಾಲಿ ವೇಳೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲು ಕಾಂಗ್ರೆಸ್...

ಫತೇಪುರ್ ರ್ಯಾಲಿ ಹೇಳಿಕೆ: ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು
ಪ್ರಧಾನಮಂತ್ರಿ ನರೇಂದ್ರ ಮೋದಿ
Published On :

ನವದೆಹಲಿ: ಉತ್ತರಪ್ರದೇಶದ ಫತೇಪುರ್ ರ್ಯಾಲಿ ವೇಳೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲು ಕಾಂಗ್ರೆಸ್ ಸೋಮವಾರ ನಿರ್ಧರಿಸಿದೆ.

ಈ ಕುರಿತಂತೆ ಮಾತನಾಡಿರುವ ಕಾಂಗ್ರೆಸ್ ಪಕ್ಷದ ಕಾನೂನು ಮತ್ತು ಮಾನವ ಹಕ್ಕುಗಳ ಇಲಾಖೆಯ ಕಾರ್ಯದರ್ಶಿ ಕೆ.ಸಿ.ಮಿತ್ತಲ್ ಅವರು, ಉತ್ತರಪ್ರದೇಶದ ಫತೇಪುರ್ ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನೀಡಿದ್ದ ಹೇಳಿಕೆ ಸಂಬಂಧ ಚುನಾವಣಾ ಆಯೋಗಕ್ಕೆ ದೂರು ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.

ಉತ್ತರಪ್ರದೇಶ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ನಿನ್ನೆಯಷ್ಟೇ ಫತೇಪುರದಲ್ಲಿ ನಡೆದ ರ್ಯಾಲಿಯಲ್ಲಿ ಭಾಷಣ ಮಾಡಿದ್ದ ಪ್ರಧಾನಿ ಮೋದಿಯವರು, ರಮ್ಜಾನ್ ಹಬ್ಬದಂದು ವಿದ್ಯುತ್ ಇರುತ್ತಾದರೆ, ದೀಪಾವಳಿ ದಿನವೂ ಅದು ಇರಬೇಕು. ಭೇದಭಾವ ಇರಕೂಡದು, ಗ್ರಾಮಗಳಲ್ಲಿ ಕಬರಿಸ್ತಾನ (ಮುಸ್ಲಿಮರ ದಫನ ಸ್ಮಶಾನ) ಇರುವುದಾದರೆ, ಸ್ಮಶಾನ (ಹಿಂದೂಗಳ ಅಂತ್ಯಸಂಸ್ಕಾರ ಸ್ಥಳ)ವೂ ಇರಬೇಕು. ಸರ್ಕಾರಗಳು ಧರ್ಮ ಮತ್ತು ಜಾತಿ ಆಧಾರದಲ್ಲಿ ತಾರತಮ್ಯ ಮಾಡಕೂಡದು. ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ನಮ್ಮ ಮಂತ್ರ ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.