ದೆಹಲಿ: ನಡುರಸ್ತೆಯಲ್ಲಿ ವ್ಯಕ್ತಿಗೆ ಗುಂಡು ಹಾರಿಸಿ ಬರ್ಬರ ಹತ್ಯೆ
ರಾಜಧಾನಿ ದೆಹಲಿಯಲ್ಲಿ ನಡುರಸ್ತೆಯಲ್ಲಿಯೇ ವ್ಯಕ್ತಿಯೊಬ್ಬರಿಗೆ ಗುಂಡು ಹಾರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯೊಂದು ಭಾನುವಾರ ರಾತ್ರಿ ನಡೆದಿದೆ...

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ನಡುರಸ್ತೆಯಲ್ಲಿಯೇ ವ್ಯಕ್ತಿಯೊಬ್ಬರಿಗೆ ಗುಂಡು ಹಾರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯೊಂದು ಭಾನುವಾರ ರಾತ್ರಿ ನಡೆದಿದೆ.
ಜೋಗಿಂದರ್ ಸಿಂಗ್ (48) ಹತ್ಯೆಯಾದ ವ್ಯಕ್ತಿಯಾಗಿದ್ದು, ಸೋನ್ಯಾ ವಿಹಾರ್ ಪ್ರದೇಶದಲ್ಲಿರುವ ಗ್ಯಾಸ್ ಏಜೆನ್ಸಿಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
ಹತ್ಯೆ ಬಗ್ಗೆ ನಮಗೆ ರಾತ್ರಿ ಸುದ್ದಿ ತಿಳಿಯಿತು. ಜೋಗಿಂದರ್ ಸಿಂಗ್ ಸಾವಿಗೆ ಒಂದು ರೀತಿಯಲ್ಲಿ ಗ್ಯಾಸ್ ಏಜೆನ್ಸಿಯೇ ಕಾರಣವಾಗಿದೆ. ಭಾನುವಾರ ಪ್ರತೀಯೊಬ್ಬರಿಗೂ ರಜಾದಿನವಾಗಿದ್ದು, ಭಾನುವಾರ ಕೂಡ ಗ್ಯಾಸ್ ಏಜೆನ್ಸಿ ಕೆಲಸ ಮಾಡುವಂತೆ ಜೋಗಿಂದರ್ ಅವರನ್ನು ಕರೆದಿತ್ತು. ಹತ್ಯೆಯಾದ ಸಮಯದಲ್ಲಿ ಸ್ಥಳದಲ್ಲಿ ಭದ್ರತೆ ಕೂಡ ಇರಲಿಲ್ಲ ಎಂದು ಜೋಗಿಂದರ್ ಸಿಂಗ್ ಅವರ ಸಹೋದರ ಹೇಳಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಪೊಲೀಸರು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಹತ್ಯೆ ಹಿಂದೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


