ಅಕ್ಷರಸ್ಥ ಕೇರಳ ತನ್ನ ಮೌಲ್ಯವನ್ನು ಕಳೆದುಕೊಳ್ಳುತ್ತಿದೆ: ಶಶಿ ತರೂರ್
ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುವುದು ಭಾರತದ ದೊಡ್ಡ ಸಮಸ್ಯೆಯಾಗಿತ್ತು. ಇದೀಗ ಅಕ್ಷರಸ್ಥ ನಾಡು ಎಂಬ ಖ್ಯಾತಿ ಪಡೆದಿರುವ ಕೇರಳದಲ್ಲೂ ನಡೆಯುತ್ತಿರುವುದು ನಿಜಕ್ಕೂ ಬೇಸರದ ಸಂಗತಿ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್...

ನವದೆಹಲಿ: ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುವುದು ಭಾರತದ ದೊಡ್ಡ ಸಮಸ್ಯೆಯಾಗಿತ್ತು. ಇದೀಗ ಅಕ್ಷರಸ್ಥ ನಾಡು ಎಂಬ ಖ್ಯಾತಿ ಪಡೆದಿರುವ ಕೇರಳದಲ್ಲೂ ನಡೆಯುತ್ತಿರುವುದು ನಿಜಕ್ಕೂ ಬೇಸರದ ಸಂಗತಿ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಸೋಮವಾರ ಹೇಳಿದ್ದಾರೆ.
ಮಲಯಾಳಂ ಖ್ಯಾತ ನಟಿಯ ಮೇಲೆ ನಡೆಸಿದ್ದ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಅವರು, ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುವುದು ದೇಶದ ಸಮಸ್ಯೆಯಾಗಿತ್ತು. ಇದೀಗ ಕೇರಳ ಕೂಡ ಇದಕ್ಕೆ ಸಾಕ್ಷಿಯಾಗುತ್ತಿದೆ. ಸಾಂಸ್ಕೃತಿಕ ನಾಡು ಹಾಗೂ ಅಕ್ಷರಸ್ಥ ನಾಡು ಇಂದು ತನ್ನ ಮೌಲ್ಯವನ್ನು ಕಳೆದುಕೊಳ್ಳುತ್ತಿದೆ. ಇಂದು ನಾವು ನಮ್ಮ ಸಾಮರ್ಥ್ಯವನ್ನು ಕಳೆದುಕೊಳ್ಳುತ್ತಿದ್ದೇವೆಂದು ಹೇಳಿದ್ದಾರೆ.
ಇದೇ ವೇಳೆ ಜನರ ಮನಸ್ಥಿತಿ ವಿರುದ್ಧ ಕಿಡಿಕಾಡಿರುವ ಅವರು, ದೇಶದಲ್ಲಿ ಈ ರೀತಿಯ ಅಪರಾಧ ಕೃತ್ಯ ನಡೆದಿದ್ದರೂ, ಕೆಲವರು ಸಂತ್ರಸ್ತ ಯುವತಿಯೇ ತಲೆತಗ್ಗಿಸುವಂತೆ ಮಾಡುತ್ತಿದ್ದಾರೆ. ಈ ರೀತಿಯ ಮನಃಸ್ಥಿತಿ ಇರುವುದರಿಂದಲೇ ಎಷ್ಟೋ ಜನರು ತಮ್ಮ ಮೇಲೆ ದೌರ್ಜನ್ಯಗಳು ನಡೆದಿದ್ದರೂ ಮುಂದಕ್ಕೆ ಬರುವುದಿಲ್ಲ. ಪ್ರಕರಣವನ್ನು ದಾಖಲಿಸುವುದಿಲ್ಲ. ತಮ್ಮ ಮೇಲೆ ದೌರ್ಜನ್ಯ ನಡೆದಿದ್ದರೂ ನಟಿ ಮುಂದೆ ಬಂದು ಪ್ರಕರಣ ದಾಖಲಿಸಿರುವುದಕ್ಕೆ ಆಕೆಯನ್ನು ಪ್ರಶಂಸಿಸಬೇಕು. ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗಬೇಕಿದೆ ಎಂದು ತಿಳಿಸಿದ್ದಾರೆ.
ರಾಜ್ಯಗಳಲ್ಲಿರುವ ಕಾನೂನು ಮತ್ತು ಸುವ್ಯವಸ್ಥೆಯ ಕ್ರಮಗಳನ್ನು ಮತ್ತಷ್ಟು ಗಟ್ಟಿಗೊಳಿಸಬೇಕಿದೆ. ನಮ್ಮ ಮಕ್ಕಳಿಗೆ ಸರಿಯಾದ ರೀತಿಯಲ್ಲಿ ಶಿಕ್ಷಣ ನೀಡಬೇಕಿದೆ. ಪ್ರಮುಖವಾಗಿ ಬೆಳೆಯುವ ಬಾಲಕರು ಹಾಗೂ ಯುವಕರಿಗೆ ಮಹಿಳೆಯರಿಗೆ ಗೌರವ ನೀಡಬೇಕೆಂಬುದನ್ನು ಹೇಳಿಕೊಡಬೇಕು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


