ಜಮ್ಮು: ರಾಜೌರಿಯಲ್ಲಿ ಗುಂಡಿನ ಚಕಮಕಿ; ಓರ್ವ ಉಗ್ರನ ಹತ್ಯೆ
ಗಡಿ ಭದ್ರತಾ ಪಡೆ ಮಂಗಳವಾರ ಬೆಳಗ್ಗೆ ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಉಗ್ರಗಾಮಿಗಳ...

Published On :
ಶ್ರೀನಗರ: ಗಡಿ ಭದ್ರತಾ ಪಡೆ ಮಂಗಳವಾರ ಬೆಳಗ್ಗೆ ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಉಗ್ರಗಾಮಿಗಳ ಒಳನುಸುಳುವಿಕೆಯನ್ನು ವಿಫಲಗೊಳಿಸುವ ಯತ್ನದಲ್ಲಿ ಓರ್ವ ಉಗ್ರ ಹತನಾಗಿದ್ದಾನೆ.
ಉಗ್ರಗಾಮಿಗಳು ಮತ್ತು ಬಿಎಸ್ಎಫ್ 163 ಬ್ಯಾಟಲಿಯನ್ ಭದ್ರತಾ ಪಡೆ ಯೋಧರ ನಡುವೆ ರಾಜೌರಿಯ ಕೇರಿ ವಲಯದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಉಗ್ರನೊಬ್ಬ ಮೃತಪಟ್ಟಿದ್ದಾನೆ. ಇನ್ನಿಬ್ಬರು ಉಗ್ರರು ತಪ್ಪಿಸಿಕೊಂಡು ಓಡಿಹೋಗಿದ್ದಾರೆ.
ಈ ತಿಂಗಳ ಆರಂಭದಲ್ಲಿ ಪಾಕಿಸ್ತಾನ ಗಡಿಯಿಂದ ಭಾರತದೊಳಗೆ ನುಸುಳಲು ಸಹಾಯಕವಾಗುವಂತೆ 20 ಮೀಟರ್ ಸುರಂಗ ತೋಡಿ ಉಗ್ರರು ಒಳನುಸುಳಿದ್ದರು. ಸಾಂಬಾ ವಲಯದ ರಾಮ್ ಗರ್ ನಲ್ಲಿ ಯೋಧರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾಗ ಸುರಂಗ ಪತ್ತೆಯಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


