ಮೋದಿ ಮೊದಲು ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಸ್ಮಶಾನ ನಿರ್ಮಿಸಲಿ: ಮಾಯವತಿ
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಅವರು, ಮೋದಿ ಮೊದಲು ಬಿಜೆಪಿ....

Published On :
ಲಖನೌ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಅವರು, ಮೋದಿ ಮೊದಲು ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಸ್ಮಶಾನಗಳನ್ನು ನಿರ್ಮಿಸಲಿ ಎಂದು ಮಂಗಳವಾರ ತಿರುಗೇಟು ನೀಡಿದ್ದಾರೆ.
ಕಳೆದ ಭಾನುವಾರ ಫತೇಪುರದಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ್ದ ಮೋದಿ, ಗ್ರಾಮವೊಂದರಲ್ಲಿ ಕಬರಿಸ್ತಾನ್ ಇದ್ದರೆ, ಅಲ್ಲಿ ಸ್ಮಶಾನವೂ ಬೇಕು. ರಂಜಾನ್‍ಗೆ ವಿದ್ಯುತ್ ಇದ್ದರೆ ದೀಪಾವಳಿಗೂ ಬೇಕು. ಈದ್ ಮತ್ತು ಹೋಳಿ ಹಬ್ಬಕ್ಕೂ ವಿದ್ಯುತ್ ಬೇಕು. ಇಂಥಾ ವಿಷಯದಲ್ಲಿ ತಾರತಮ್ಯ ಸಲ್ಲದು ಎಂದು ಸಮಾಜವಾದಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಾಯಾವತಿ, ಮೋದಿಯವರ ಹೇಳಿಕೆಯನ್ನು ಖಂಡಿಸಿದ್ದಾರೆ. ಬಿಎಸ್ಪಿ ತನ್ನ ಆಡಳಿತಾವಧಿಯಲ್ಲಿ ಎಲ್ಲಾ ಧರ್ಮಗಳನ್ನು ಗೌರವಿಸಿದೆ. ಆದರೆ ಮೋದಿ ಉತ್ತರಪ್ರದೇಶದ ಬಗ್ಗೆ ಮಾತನಾಡುವ ಮುನ್ನ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಮೊದಲು ಸ್ಮಶಾನ ನಿರ್ಮಿಸಲಿ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


